ರಾಜಕಾರಣ ಪ್ರವೇಶಕ್ಕೆ 50 ವರ್ಷ । ಬಿಎಸ್‌ವೈ ಉತ್ಸವಕ್ಕೆ ಸಿದ್ಧತೆ

Published : Feb 28, 2026, 07:57 AM IST
BS Yediyurappa

ಸಾರಾಂಶ

ರಾಜಕೀಯ ಜೀವನದಲ್ಲಿ 50 ವಸಂತಗಳನ್ನು ಪೂರೈಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಅದ್ಧೂರಿಯಾಗಿ ಅಭಿನಂದನೆ ಸಲ್ಲಿಸಲು ಚಿತ್ರದುರ್ಗದಲ್ಲಿ ಬರುವ ಮೇ ತಿಂಗಳಿನಲ್ಲಿ ಆಯೋಜಿಸಲು ಉದ್ದೇಶಿಸಿರುವ ಸಮಾವೇಶದ ಸಿದ್ಧತೆಗೆ ಚಾಲನೆ ದೊರೆತಿದೆ.

  ಶಿಕಾರಿಪುರ :  ರಾಜಕೀಯ ಜೀವನದಲ್ಲಿ 50 ವಸಂತಗಳನ್ನು ಪೂರೈಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಅದ್ಧೂರಿಯಾಗಿ ಅಭಿನಂದನೆ ಸಲ್ಲಿಸಲು ಚಿತ್ರದುರ್ಗದಲ್ಲಿ ಬರುವ ಮೇ ತಿಂಗಳಿನಲ್ಲಿ ಆಯೋಜಿಸಲು ಉದ್ದೇಶಿಸಿರುವ ಸಮಾವೇಶದ ಸಿದ್ಧತೆಗೆ ಚಾಲನೆ ದೊರೆತಿದೆ. ಇದಕ್ಕಾಗಿ ಸ್ವಾಗತ ಸಮಿತಿ ರಚಿಸಲಾಗಿದ್ದು, ಕೆಎಲ್‌ಇ ಮಾಜಿ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ ಅವರನ್ನು ಅಧ್ಯಕ್ಷರನ್ನಾಗಿ, ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾರ್ಯಾಧ್ಯಕ್ಷರನ್ನಾಗಿ, ಸಂಸದ ಗೋವಿಂದ ಕಾರಜೋಳ ಅವರನ್ನು ಗೌರವಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಮಹಂತೇಶ ಕವಟಗಿ‌ಮಠ, ಬಿ.ಎಸ್‌.ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿದೆ. ಯಡಿಯೂರಪ್ಪ ಅವರು ಮಾಡಿದ ಕೆಲಸವನ್ನು ರಾಜ್ಯಕ್ಕೆ ಪರಿಚಯ ಮಾಡಬೇಕು ಎಂಬ ನಿಟ್ಟಿನಲ್ಲಿ ಮೇ ತಿಂಗಳಿನಲ್ಲಿ ಚಿತ್ರದುರ್ಗದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸಮಾರಂಭದಲ್ಲಿ ರಾಜ್ಯದ ಎಲ್ಲಾ ಭಾಗಗಳಿಂದ ಯಡಿಯೂರಪ್ಪ ಅವರ ಲಕ್ಷಾಂತರ ಅಭಿಮಾನಿಗಳು ಆಗಮಿಸಲಿದ್ದು, ಹರಗುರು ಪಂಚ ಪೀಠಾಧಿಪತಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

100 ವರ್ಷ ಬಾಳಲಿ-ಗೋವಿಂದ ಕಾರಜೋಳ:

ಇದೇ ವೇಳೆ ಮಾತನಾಡಿದ ಗೋವಿಂದ ಕಾರಜೋಳ, ಫೆ.28 ಯಡಿಯೂರಪ್ಪ ಅವರ ಜನ್ಮ ದಿನವಾಗಿದೆ. ಉಪಮುಖ್ಯಮಂತ್ರಿ ಆಗಿ, ಮುಖ್ಯಮಂತ್ರಿ ಆಗಿ 50 ವರ್ಷ ರಾಜಕೀಯದಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟಿ ಬೆಳೆಸಿದವರು ಅವರು. ರೈತರ ಬಗ್ಗೆ ಅಪಾರ ಪ್ರೀತಿ. ಹೆಣ್ಣು ಮಕ್ಕಳು ಓದಲು ಪ್ರೋತ್ಸಾಹ ನೀಡಿದವರು. ಹೆಣ್ಣು ಮಕ್ಕಳಿಗಾಗಿ ವಸತಿ ಶಾಲೆ ಮಾಡಿದವರು ಯಡಿಯೂರಪ್ಪ. ಕುಟುಂಬಕ್ಕೆ ಹೆಣ್ಣು ಮಕ್ಕಳು ಭಾರ ಆಗಬಾರದು ಎಂಬ ಕಾರಣಕ್ಕೆ ಭಾಗ್ಯಲಕ್ಷ್ಮಿ ಬಾಂಡ್ ಕೊಟ್ಟವರು. ರೈತರಿಗೆ ಹಾಲಿನ ಪ್ರೋತ್ಸಾಹ ಧನ ಸೇರಿದಂತೆ ಅನೇಕ ಕಾರ್ಯಕ್ರಮ ಮಾಡಿದ ಅವರಿಗೆ 84 ವರ್ಷ. ನಾನು ಆ ಭಗವಂತನ ಹತ್ತಿರ ಪ್ರಾರ್ಥನೆ ಮಾಡುತ್ತೇನೆ. 100 ವರ್ಷ ಅವರು ಬಾಳಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

50 ವರ್ಷ ರಾಜಕಾರಣದಲ್ಲಿ ತೊಡಗಿಸಿಕೊಂಡು ಕೆಲಸ ಮಾಡಿದ ಅವರನ್ನು ನಾಡಿನ ಗಣ್ಯರೆಲ್ಲಾ ಸೇರಿ ಮೇ ತಿಂಗಳಲ್ಲಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿದೆ. ಕಾರ್ಯಕ್ರಮದ ರೂಪರೇಷೆ ಹೇಗೆ ಮಾಡಬೇಕು ಅನ್ನೋದನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಹೇಳಿದರು.

ಸಮಾಜ ಸೇವೆ, ರಾಜಕೀಯ ಸೇವೆಯನ್ನು 50 ವರ್ಷ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಯಡಿಯೂರಪ್ಪ ಅವರು ಸಮಾಜ ಸೇವೆ, ರಾಜಕೀಯ ಸೇವೆಯನ್ನು 50 ವರ್ಷ ಮಾಡಿದ್ದಾರೆ. ಅವರಿಗೆ ಸನ್ಮಾನ ಮಾಡಬೇಕು ಎಂದು ಗೋವಿಂದ ಕಾರಜೋಳ ತಿಳಿಸಿದರು.

 ಅವರು ತೀರ್ಮಾನ ಮಾಡಿ ನಂತರ ನಮ್ಮ ಹತ್ತಿರ ಚರ್ಚೆ ಮಾಡಿದರು. ನಿಮ್ಮ ತೀರ್ಮಾನ ಸರಿಯಾಗಿದೆ ಎಂದು ತಿಳಿಸಿದೆವು. ಯಡಿಯೂರಪ್ಪರ 84ನೇ ಹುಟ್ಟುಹಬ್ಬದ ಪ್ರಯುಕ್ತ ಘೋಷಿಸಲಾಗಿದೆ.ಮುಂದೆ ರಾಷ್ಟ್ರೀಯ ನಾಯಕರನ್ನು ಯಾರನ್ನು ಕರೆಸಬೇಕು? ಇದೆಲ್ಲಾ ಮುಂದೆ ತೀರ್ಮಾನ ಮಾಡುತ್ತೇವೆ. ನಾವೆಲ್ಲಾ ಯಡಿಯೂರಪ್ಪ ಅವರ ಮನೆಗೆ ಹೋಗಿದ್ದೆವು. ನಾನು ಮಾಡಿ ಎಂದು ಹೇಳಲ್ಲ, ಬೇಡ ಅಂತಲೂ ಹೇಳಲ್ಲ. ಅವರ ಹೋರಾಟ, ಅವರ ರಾಜಕೀಯ ಜೀವನ ಮುಂದೆ ಬರುವ ರಾಜಕಾರಣಿಗಳಿಗೆ ಮಾದರಿ ಆಗಲಿ ಎನ್ನುವ ದೃಷ್ಟಿಯಿಂದ ನಾವು ಅಭಿನಂದನಾ ಕಾರ್ಯಕ್ರಮ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಅನಂತಕುಮಾರ ಹೆಗಡೆ ಮತ್ತೆ ಸಕ್ರಿಯ ರಾಜಕಾರಣ ಪ್ರವೇಶ?
ಯಾವ ಶಾಸಕರೂ ನನ್ನ ಪರ ದೆಹಲಿಗೆ ಹೋಗಬೇಡಿ: ಡಿಕೆ ಶಿವಕುಮಾರ್‌