ರಾಜ್ಯ ರಾಜಕಾರಣಕ್ಕೆ ಸೂಕ್ತ ಸಮಯದಲ್ಲಿ ನಿರ್ಧಾರ : ಎಚ್ಡಿಕೆ

Published : Nov 16, 2026, 06:44 AM IST
hd kumaraswamy

ಸಾರಾಂಶ

ನಮ್ಮನ್ನು ನಾಯಕರನ್ನಾಗಿ ಬೆಳೆಸಿ ಉಳಿಸಿದ ರಾಮನಗರವನ್ನು ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯ ರಾಜಕಾರಣಕ್ಕೆ ವಾಪಸ್ ಬರುವ ಬಗ್ಗೆ ಸೂಕ್ತ ಸಮಯದಲ್ಲಿ ತೀರ್ಮಾನ ಮಾಡುತ್ತೇನೆ ಎನ್ನುವ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಕುರಿತು ಮತ್ತೆ ಸುಳಿವು

ರಾಮನಗರ: ನಮ್ಮನ್ನು ನಾಯಕರನ್ನಾಗಿ ಬೆಳೆಸಿ ಉಳಿಸಿದ ರಾಮನಗರವನ್ನು ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯ ರಾಜಕಾರಣಕ್ಕೆ ವಾಪಸ್ ಬರುವ ಬಗ್ಗೆ ಸೂಕ್ತ ಸಮಯದಲ್ಲಿ ತೀರ್ಮಾನ ಮಾಡುತ್ತೇನೆ ಎನ್ನುವ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಕುರಿತು ಮತ್ತೆ ಸುಳಿವು ನೀಡಿದ್ದು, ರಾಮನಗರ ಜಿಲ್ಲೆಯ ೪ ವಿಧಾನಸಭಾ ಕ್ಷೇತ್ರಗಳಲ್ಲಿ ತಾವು ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದರು.

ಮಹದೇಶ್ವರ ದೇವಸ್ಥಾನದಲ್ಲಿ ಪೂಜೆ

ತಾಲೂಕಿನ ಹುಣಸನಹಳ್ಳಿ ಗ್ರಾಮದ ಮಹದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ನನಗೆ ರಾಜಕೀಯವಾಗಿ ಜನ್ಮ ನೀಡಿದ ಕ್ಷೇತ್ರ.

ಜನರ ಪ್ರೀತಿ ಮತ್ತು ಆಶೀರ್ವಾದದಿಂದಲೇ ನಾವು ನಾಯಕರಾಗಿದ್ದೇವೆ

ಈ ಜಿಲ್ಲೆಯ ಜನರ ಪ್ರೀತಿ ಮತ್ತು ಆಶೀರ್ವಾದದಿಂದಲೇ ನಾವು ನಾಯಕರಾಗಿದ್ದೇವೆ. ನಮ್ಮನ್ನು ಈ ಜಿಲ್ಲೆಯಿಂದ ಹೊರಹಾಕುತ್ತೇವೆ ಎಂದು ಕೆಲವರು ಶಪಥ ಮಾಡಿದ್ದಾರೆ. ಆದರೆ ಅವರಿಗೆ ಅಂತಹ ಶಕ್ತಿ ಇಲ್ಲ ಎಂದು ಹೇಳಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಹಿರಿಯೂರು ಟಿಕೆಟ್‌ ಬಿಜೆಪಿಗೆ: ಅಶೋಕ್‌ - ನಮ್ಮ ಪಕ್ಷದಲ್ಲಿ ತೀರ್ಮಾನ ಆಗಿದೆ
ಬಿಜೆಪಿಗರು ವಾಸ್ತವ ಅರಿಯಲಿ : ಎಚ್‌ಡಿಕೆ - ಜೆಡಿಎಸ್‌ ಪರ ಕ್ಷೇತ್ರದಲ್ಲಿ ಒಲವಿದೆ