;Resize=(412,232))
ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ನೌಕರರ ಸಂಘ ಮತ್ತು ಒಕ್ಕೂಟದಿಂದ ಜೂನ್ 29ಕ್ಕೆ ಬೆಂಗಳೂರಿನ ತ್ರಿಪುರ ವಾಸಿನಿ, ಅರಮನೆ ಮೈದಾನ, ಗೇಟ್ ಸಂಖ್ಯೆ–2ರಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ಬಲರಾಮ್ ತಿಳಿಸಿದರು.
ಈ ವಿಷಯ ತಿಳಿಸಿದ ಅವರು, ಕಾರ್ಯಕ್ರಮದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್, ರಾಜ್ಯದ ವಿವಿಧ ಎಸ್ಕಾಂಗಳ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ಹಿರಿಯ ಅಧಿಕಾರಿಗಳು, ವಿವಿಧ ನೌಕರರ ಸಂಘಗಳ ಪದಾಧಿಕಾರಿಗಳು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಸಾವಿರಾರು ವಿದ್ಯುತ್ ನೌಕರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸದೆ ಸರ್ಕಾರದ ಅಧೀನದಲ್ಲಿ ಮುಂದುವರಿಸಬೇಕು. ಖಾಸಗಿ ಕಂಪನಿಗಳಿಗೆ ವಿದ್ಯುತ್ ಸಾಗಣೆ ವಿತರಣೆ ಪರವಾನಗಿ ನೀಡಬಾರದು. ವಿದ್ಯುತ್ ಕ್ಷೇತ್ರದ ಅಭಿವೃದ್ಧಿ, ನೌಕರರ ಕಲ್ಯಾಣ ಹಾಗೂ ಸಾರ್ವಜನಿಕ ಸೇವೆ ಗುಣಮಟ್ಟ ಹೆಚ್ಚಿಸುವ ಕುರಿತು ಚರ್ಚೆಗಳು ನಡೆಯಲಿವೆ ಎಂದು ತಿಳಿಸಿದರು.
ಕವಿಪ್ರನಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಶಿವರಾಂ, ಖಜಾಂಚಿ ವರದರಾಜ, ಕವಿ ಮಂಡಳಿ ಇಂಜಿನಿಯರ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿಗಳ ಚಂದ್ರಶೇಖರ್ ದೇಸಾಯಿ ಹಾಜರಿದ್ದರು.