ಮುನಿಸಿಕೊಂಡಿದ್ದ ಆಪ್ತಗೆ ಸಿದ್ದು ಹೊಸ ಹುದ್ದೆ ಭಾಗ್ಯ - ಬಿಆರ್‌ಪಿ ಯೋಜನಾ ಆಯೋಗ ಉಪಾಧ್ಯಕ್ಷ

Published : Feb 18, 2025, 05:11 AM IST
BR Patil

ಸಾರಾಂಶ

ಕೆಲ ವಿಚಾರಗಳಿಗಾಗಿ ಬೇಸರಗೊಂಡು ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಆಳಂದ ಶಾಸಕ ಬಿ.ಆರ್‌.ಪಾಟೀಲ್‌ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಮಹತ್ವದ ಹುದ್ದೆ ಕಲ್ಪಿಸಿದ್ದಾರೆ.

 ಬೆಂಗಳೂರು : ಕೆಲ ವಿಚಾರಗಳಿಗಾಗಿ ಬೇಸರಗೊಂಡು ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಆಳಂದ ಶಾಸಕ ಬಿ.ಆರ್‌.ಪಾಟೀಲ್‌ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಮಹತ್ವದ ಹುದ್ದೆ ಕಲ್ಪಿಸಿದ್ದಾರೆ.

ರಾಜ್ಯದ ನೀತಿ ಆಯೋಗ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಬಿ.ಆರ್‌.ಪಾಟೀಲ್‌ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ಎಲ್ಲಾ ಸೌಲಭ್ಯಗಳೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಈ ಆದೇಶ ಮಾಡಲಾಗಿದೆ. ಈ ಮೂಲಕ ನೊಂದ ಆಪ್ತ ವಲಯದ ಶಾಸಕನಿಗೆ ಸಿದ್ದರಾಮಯ್ಯ ಉತ್ತಮ ಸ್ಥಾನಮಾನ ನೀಡಿ ಮನವೊಲಿಕೆ ಪ್ರಯತ್ನ ಮಾಡಿದ್ದಾರೆ.

ಕ್ಷೇತ್ರಕ್ಕೆ ಅನುದಾನ ಬಿಡುಗಡೆಯಾಗುತ್ತಿಲ್ಲ ಮತ್ತು ಸಚಿವರು ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕಾಗಿ ಬಿ.ಆರ್.ಪಾಟೀಲ್ ಅಸಮಾಧಾನಗೊಂಡಿದ್ದರು. ಆದರೆ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ಕೊಟ್ಟ ಕಾರಣ ಏನೆಂಬುದರ ಕುರಿತು ಸ್ಪಷ್ಟನೆ ಕೊಟ್ಟಿರಲಿಲ್ಲ.

- ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ಆಳಂದ ಶಾಸಕ ಬಿ.ಆರ್‌.ಪಾಟೀಲ್‌

- ಕೆಲ ವಿಚಾರಗಳಿಗೆ ಬೇಸರಗೊಂಡು ಸಿಎಂ ರಾಜಕೀಯ ಸಲಹೆಗಾರ ಹುದ್ದೆ ತ್ಯಜಿಸಿದ್ದರು

- ಕ್ಷೇತ್ರಕ್ಕೆ ಅನುದಾನ ಬಿಡುಗಡೆಯಾಗುತ್ತಿಲ್ಲ, ಸಚಿವರು ಮಾತು ಕೇಳುತ್ತಿಲ್ಲ ಎಂದು ದೂರಿದ್ದರು

- ಇದೀಗ ಪಾಟೀಲ ನೀತಿ ಆಯೋಗ, ಯೋಜನಾ ಆಯೋಗದ ಉಪಾಧ್ಯಕ್ಷ ಹುದ್ದೆ ನೀಡಿದ ಸಿಎಂ

- ನೊಂದ ಶಾಸಕನಿಗೆ ಉತ್ತಮ ಸ್ಥಾನಮಾನ ನೀಡಿ ಮನವೊಲಿಸಲು ಯತ್ನಿಸಿದ ಮುಖ್ಯಮಂತ್ರಿ

PREV

Recommended Stories

ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ಆರ್‌ಎಸ್‌ಎಸ್ ಗೀತೆ ಹಾಡಿದ ಕೈ ಶಾಸಕ ಡಾ। ರಂಗನಾಥ್‌