ಮೂರು ಕ್ಷೇತ್ರಗಳಲ್ಲಿ ವಿಧಾನಸಭಾ ಉಪ ಚುನಾವಣೆ : ವಿಪಕ್ಷಗಳಿಗೆ ಪಾಠ ಕಲಿಸಿದ ಮತದಾರ - ಎಂ.ಜಯರಾಮ್

KannadaprabhaNewsNetwork |  
Published : Nov 24, 2024, 01:49 AM ISTUpdated : Nov 24, 2024, 04:09 AM IST
ಸಿಕೆಬಿ-5 ವಿಧಾನಸಭಾ ಉಪ ಚುನಾವಣೆ ಮೂರು ಕ್ಷೇತ್ರಗಳಲ್ಲಿ  ಕಾಂಗ್ರೆಸ್ ಪಕ್ಷ ಜಯಗಳಿಸಿದ ಹಿನ್ನಲೆ ನಗರದ ಅಂಬೇಡ್ಕರ್ ವೃತ್ತದಲ್ಲಿ  ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು   ವಿಜಯೋತ್ಸವ ಆಚರಿಸಿದರು | Kannada Prabha

ಸಾರಾಂಶ

ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಂಡಿರುವ ಪಂಚ ಗ್ಯಾರಂಟಿಗಳಿಂದಾಗಿಯೂ ಮತದಾರರು ಉಪ ಚುನಾವಣೆ ನಡೆದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರುಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲವಾಗಿ ನಿಂತು ಮತ ಚಲಾಯಿಸಿ ಗೆಲುವಿಗೆ ಕಾರಣರಾಗಿದ್ದಾರೆ.  

 ಚಿಕ್ಕಬಳ್ಳಾಪುರ : ವಿಧಾನಸಭಾ ಉಪ ಚುನಾವಣೆ ಮೂರು ಕ್ಷೇತ್ರಗಳಲ್ಲಿ ಆಡಳಿತಾ ರೂಡ ಕಾಂಗ್ರೆಸ್ ಪಕ್ಷ ಜಯಗಳಿಸಿದ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ವಿಜಯೋತ್ಸವದಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.

ಈವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜಯರಾಮ್ ಮಾತನಾಡಿ,ವಿಪಕ್ಷಗಳು ಮುಡಾ, ವಕ್ಫ್‌ ಎಂದು ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮಾಡಿದ್ದರು, ಆದರೆ ಮತದಾರ ಬಾಂಧವರು ಅವುಗಳನ್ನೆಲ್ಲ ಅಲಕ್ಷಿಸಿ ಕೈ ಹಿಡಿದಿದ್ದಾರೆ ಎಂದರು.

ಪಂಚ ಗ್ಯಾರಂಟಿ ಕಾರಣ

ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಂಡಿರುವ ಪಂಚ ಗ್ಯಾರಂಟಿಗಳಿಂದಾಗಿಯೂ ಮತದಾರರು ಉಪ ಚುನಾವಣೆ ನಡೆದ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರುಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲವಾಗಿ ನಿಂತು ಮತ ಚಲಾಯಿಸಿ ಗೆಲುವಿಗೆ ಕಾರಣರಾಗಿದ್ದಾರೆಂದು ತಿಳಿಸಿದರು.

ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಮುನೇಗೌಡ ಮಾತನಾಡಿ, ಬಿಜೆಪಿ ಜೆಡಿಎಸ್ ಸುಳ್ಳನ್ನ ಸತ್ಯ ಮಾಡಲು ಹೊರಟಿದ್ದರು, ಅದು ಸಾಧ್ಯವಾಗಿಲ್ಲ. ಸಿದ್ದರಾಮಯ್ಯ ಸದಾ ಜ‌ನರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ರಾಜಕೀಯ ಕುತಂತ್ರಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಗೆ ಈ ಚುನಾವಣೆಯಲ್ಲಿ ಜನರೇ ತಿರಸ್ಕರಿಸಿದ್ದಾರೆ ಎಂದರು.

ಮುಡಾಗೆ ಮನ್ನಣೆ ನೀಡಿಲ್ಲ

ವಾಲ್ಮೀಕಿ, ವಕ್ಫ್ ಹಾಗೂ ಮುಡಾ ವಿಚಾರಕ್ಕೆ ಜನರು ಮನ್ನಣೆ ಕೊಟ್ಟಿಲ್ಲ. ಮುಡಾ ವಿಚಾರಕ್ಕೆ ಪಾದಯಾತ್ರೆ ಸಹ ಮಾಡಿದರು. ವಕ್ಪ್ ವಿಚಾರವಾಗಿ ಧರಣಿ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಚುನಾವಣೆಯ ಫಲಿತಾಂಶ ಉತ್ತರ ಕೊಟ್ಟಿದೆ. ಈ ಸರ್ಕಾರದ ಪರವಾಗಿ ಜನರು ತೀರ್ಪು ಕೊಟ್ಟಿದ್ದಾರೆಂದು ತಿಳಿಸಿದರು.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಮಾತನಾಡಿ, ಕಾಂಗ್ರೆಸ್‌ ಸರ್ಕಾರದ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳು ಸೇರಿದಂತೆ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕೆಂಬ ಕಾರ್ಯಕರ್ತರ ಛಲದಿಂದಾಗಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದರು.

ಒಗ್ಗಟ್ಟು ಫಲ ನೀಡಿದೆ

ಮೂರು ಕ್ಷೇತ್ರಗಳ ಗೆಲುವಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಸಚಿವರು, ಶಾಸಕರು, ಕಾರ್ಯಕರ್ತರು ಒಗ್ಗಟ್ಟಾಗಿದ್ದರಿಂದ ನಮ್ಮ ಅಭ್ಯರ್ಥಿಗಳಿಗೆ ಗೆಲುವಾಗಿದೆ ಎಂದು ತಿಳಿಸಿದರು. ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ಎಂ.ರಘು, ಕುಬೇರ್ ಅಚ್ಚು, ಮಮತಾಮೂರ್ತಿ,ವಿನಯ್ ಬಂಗಾರಿ,ವೆಂಕಟೇಶ್,ಮತ್ತಿತರರು ಇದ್ದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ