ಜಿರಳೆ ಪಕ್ಷ ಅಧ್ಯಕ್ಷ ಅಭಿಜೀತ್‌ ದೀಪ್ಕೆಗೆ ಹಲ್ಲೆ, ಕಪಾಳಮೋಕ್ಷ

Published : Jun 16, 2026, 09:33 AM IST
cockroach janta party

ಸಾರಾಂಶ

ಕಾಕ್ರೋಚ್‌ ಜನತಾ ಪಾರ್ಟಿಯ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ಮೇಲೆ ಕೆಲವು ಯುವಕರು ಕಪಾಳಮೋಕ್ಷ ಮಾಡಿದ ಘಟನೆ ಜೈಪುರದ ಶಹೀದ್ ಸ್ಮಾರಕದಲ್ಲಿ ಸೋಮವಾರ ನಡೆದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನಿರುದ್ಯೋಗ ಸೇರಿದಂತೆ ಹಲವು ಸಮಸ್ಯೆಗಳನ್ನು ಪ್ರಶ್ನಿಸಿ ಸಿಜೆಪಿ ಪ್ರತಿಭಟನೆ ಆಯೋಜಿಸಿತ್ತು

 ಜೈಪುರ: ಕಾಕ್ರೋಚ್‌ ಜನತಾ ಪಾರ್ಟಿಯ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ಮೇಲೆ ಕೆಲವು ಯುವಕರು ಕಪಾಳಮೋಕ್ಷ ಮಾಡಿದ ಘಟನೆ ಜೈಪುರದ ಶಹೀದ್ ಸ್ಮಾರಕದಲ್ಲಿ ಸೋಮವಾರ ನಡೆದಿದೆ.

ಸಿಜೆಪಿ ಪ್ರತಿಭಟನೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನಿರುದ್ಯೋಗ ಸೇರಿದಂತೆ ಹಲವು ಸಮಸ್ಯೆಗಳನ್ನು ಪ್ರಶ್ನಿಸಿ ಸಿಜೆಪಿ ಪ್ರತಿಭಟನೆ ಆಯೋಜಿಸಿತ್ತು. ದೀಪ್ಕೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸುತ್ತಿದ್ದಾಗ ಅವರ ಬೆಂಬಲಿಗರು ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಸಾಗುತ್ತಿದ್ದರು. 

ಗುಂಪಿನಲ್ಲಿದ್ದ ಕೆಲವು ಯುವಕರು ಕಪಾಳಮೋಕ್ಷ

 ಆಗ ಗುಂಪಿನಲ್ಲಿದ್ದ ಕೆಲವು ಯುವಕರು ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ಮರುಕ್ಷಣ ಆರೋಪಿಗಳ ಮೇಲೆ ದೀಪ್ಕೆ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ನಂತರ ಪೊಲೀಸರು ಮಧ್ಯಪ್ರವೇಶಿಸಿ, ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಪಂಚ ಗ್ಯಾರಂಟಿ ಯೋಜನೆಗಳಿಗೆ ವೋಟರ್‌ ಐಡಿ ಕಡ್ಡಾಯ: ಡಿಕೆಶಿ!
ಆರೆಸ್ಸೆಸ್ ನೋಂದಾಯಿಸಿ, ಆಸ್ತಿ ಮೂಲ ತಿಳಿಸಿ: ಪ್ರಿಯಾಂಕ್‌ ಖರ್ಗೆ