ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಚಿತ್ರನಟ ದರ್ಶನ್ ರೋಡ್ ಶೋ

KannadaprabhaNewsNetwork |  
Published : Apr 20, 2024, 01:04 AM ISTUpdated : Apr 20, 2024, 05:42 AM IST
19ಕೆಎಂಎನ್ ಡಿ13 | Kannada Prabha

ಸಾರಾಂಶ

 ಸ್ಟಾರ್‌ಚಂದ್ರು ನನ್ನ ಸ್ನೇಹಿತರು ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದಾರೆ. ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಜಯಶೀಲರನ್ನಾಗಿ ಮಾಡಿಕೊಡಬೇಕು - ದರ್ಶನ್

 ಕೆ.ಆರ್.ಪೇಟೆ :  ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಚಿತ್ರನಟ ದರ್ಶನ್ ತಾಲೂಕಿನಾದ್ಯಂದ ವಿವಿಧ ಗ್ರಾಮಗಳಲ್ಲಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.

ತಾಲೂಕಿನ ಅಕ್ಕಿಹೆಬ್ಬಾಳು, ಹರಿಹರಪುರ, ಹೊಸಹೊಳಲು, ಕಿಕ್ಕೇರಿ ಸೇರಿದಂತೆ ಹಲವು ಕಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿ ಮಾತನಾಡಿ, ನಿಮ್ಮ ಋಣ ನಮ್ಮ ಮೇಲಿದೆ. ಆ ಋಣವನ್ನು ಇನ್ನೂ ನೂರು ಜನ್ಮ ಎತ್ತಿದರೂ ತೀರಿಸಲು ಸಾಧ್ಯವಿಲ್ಲ. ನನ್ನನ್ನು ಚಿತ್ರರಂಗದಲ್ಲಿ ಎತ್ತರಕ್ಕೆ ಬೆಳೆಸಿದ್ದೀರಿ. ನನ್ನ ಏಳಿಗೆಗೆ ಕಾರಣವಾಗಿರುವ ಅಭಿಮಾನಿಗಳಿಗೆ ಹೆಚ್ಚು ಮಹತ್ವ ನೀಡುತ್ತೇನೆ ಎಂದರು.

ಕೆ.ಆರ್.ಪೇಟೆ ತಾಲೂಕಿಗೆ ಯಾವಾಗ ಬಂದರೂ ನನ್ನನ್ನು ಬಹಳ ಆತ್ಮೀಯವಾಗಿ ಬರಮಾಡಿಕೊಳ್ಳುತ್ತೀರಿ. ನಾನು ಮಾಡಿರುವ ಮನವಿಗೆ ಸ್ಪಂದಿಸಿದ್ದೀರಿ. ಸ್ಟಾರ್‌ಚಂದ್ರು ನನ್ನ ಸ್ನೇಹಿತರು ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದಾರೆ. ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಜಯಶೀಲರನ್ನಾಗಿ ಮಾಡಿಕೊಡಬೇಕು ಎಂದು ಕೋರಿದರು.

ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಜನಸೇವೆ ಮಾಡಬೇಕೆಂಬ ಉದ್ದೇಶ ಇಟ್ಟುಕೊಂಡು ಸ್ಟಾರ್ ಚಂದ್ರು ರಾಜಕೀಯ ಪ್ರವೇಶ ಮಾಡಿದ್ದಾರೆ. ನಿಮ್ಮ ಮತಕ್ಕೆ ದನಿಯಾಗಿ ಕೆಲಸ ಮಾಡಲಿದ್ದಾರೆ. ಉತ್ತಮ ಸ್ನೇಹಜೀವಿಯಾಗಿರುವ ಅವರು ನಿಮ್ಮ ಸೇವೆ ಮಾಡುತ್ತಾರೆ ಎಂಬ ಭಾವನೆ ನನಗಿದೆ ಎಂದರು.

ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಂತೆ ಇರುವ ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ನಿಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಳಹಳ್ಳಿ ವಿಶ್ವನಾಥ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ನಟ ದರ್ಶನ್‌ ಪ್ರಚಾರ ವಾಹನಕ್ಕೆ ವಿದ್ಯುತ್‌ ತಂತಿ ಸ್ಪರ್ಶ:  ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು 

  ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ಚಂದ್ರು ಪರ ನಟ ದರ್ಶನ್‌ ಚುನಾವಣಾ ಪ್ರಚಾರ ನಡೆಸುವ ವೇಳೆ ಪ್ರಚಾರ ವಾಹನಕ್ಕೆ ವಿದ್ಯುತ್‌ ತಂತಿ ಸ್ಪರ್ಶಿಸಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರಬಾಚನಹಳ್ಳಿ ಬಳಿಯಲ್ಲಿ ಶುಕ್ರವಾರ ನಟ ದರ್ಶನ್ ಪ್ರಚಾರದಲ್ಲಿ ತೊಡಗಿದ್ದರು. ಪ್ರಚಾರದ ವಾಹನದ ವೇಗವಾಗಿ ಮುಂದೆ ಸಾಗುತ್ತಿದ್ದಾಗ ದಿಢೀರ್ ವಿದ್ಯುತ್ ತಂತಿ ಸ್ಪರ್ಶಿಸಿದೆ. ನಟ ದರ್ಶನ್ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿ ಕೂಡಲೇ ವಿದ್ಯುತ್ ತಂತಿ ಕೂಡಲೇ ತುಂಡಾಗಿ ಬಿದ್ದಿದ್ದರಿಂದ ಅನಾಹುತ ತಪ್ಪಿದೆ. ಘಟನೆಯಲ್ಲಿ ನಟ ದರ್ಶನ್ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಈ ಘಟನೆಯ ಬಳಿಕ ನಟ ದರ್ಶನ್ ಲೋಕಸಭಾ ಚುನಾವಣಾ ಪ್ರಚಾರವನ್ನು ಅರ್ಧಕ್ಕೇ ಮೊಟಕುಗೊಳಿಸಿ ಕಾರಿನಲ್ಲಿ ಬೆಂಗಳೂರಿಗೆ ತೆರಳಿದರು ಎಂದು ತಿಳಿದು ಬಂದಿದೆ.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ