ಅಖಂಡ ಶ್ರೀನಿವಾಸಮೂರ್ತಿ ಜೆಡಿಎಸ್‌ ಸೇರ್ಪಡೆ

Published : Jun 22, 2026, 09:11 AM ISTUpdated : Jun 22, 2026, 09:12 AM IST
JDS

ಸಾರಾಂಶ

ಪುಲಿಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು. ಚ್‌.ಡಿ.ಕುಮಾರಸ್ವಾಮಿ ಅವರು ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

  ಬೆಂಗಳೂರು :  ಪುಲಿಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು.

ಭಾನುವಾರ ಪುಲಿಕೇಶಿನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ತಮ್ಮ ಸ್ವಂತ ಮನೆಗೆ ವಾಪಸ್ಸಾಗಿದ್ದಾರೆ.

ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಅಖಂಡ ಶ್ರೀನಿವಾಸಮೂರ್ತಿ ಅವರು ತಮ್ಮ ಸ್ವಂತ ಮನೆಗೆ ವಾಪಸ್ಸಾಗಿದ್ದಾರೆ. ಅವರನ್ನು ಹೃದಯಪೂರ್ವಕವಾಗಿ ಪಕ್ಷಕ್ಕೆ ಬರಮಾಡಿಕೊಡಿದ್ದೇನೆ. ಮುಂದಿನ ದಿನಗಳಲ್ಲಿ ಅವರು ಬೆಂಗಳೂರು ಸೇರಿ ರಾಜ್ಯದಲ್ಲಿ ಪಕ್ಷವನ್ನು ಬಲಿಷ್ಠಗೊಳಿಸುವ ಕೆಲಸ ಮಾಡುತ್ತಾರೆ. ಅಖಂಡ ಶ್ರೀನಿವಾಸ್ ಮೂರ್ತಿ ಅವರನ್ನು ಕಾಂಗ್ರೆಸ್ ಪಕ್ಷ ಸರಿಯಾಗಿ ನಡೆಸಿಕೊಳ್ಳಲಿಲ್ಲ. ಹಿಂದೆ ನಡೆದ ಕಹಿ ಘಟನೆಗಳು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಈ ಬಹಿರಂಗ ಸಭೆಯಲ್ಲಿ ನಾನು ಚರ್ಚೆ ಮಾಡಲು ಬಯಸುವುದಿಲ್ಲ. ಅವರ ಮನೆಗೆ ಬೆಂಕಿ ಹಾಕಲಾಯಿತು. ಆದರೂ ಅವರು ಎದೆಗುಂದದೆ ತನ್ನನ್ನು ನಂಬಿದ ಕಾರ್ಯಕರ್ತರ ಜೊತೆ ನಿಂತರು. ಕೆಲವರು ಪರಿಸ್ಥಿತಿಯ ದುರ್ಲಾಭ ಪಡೆಯಲು ಪ್ರಯತ್ನಿಸಿದರು ಎಂದು ಬೇಸರಿಸಿದರು.

ಪುಲಕೇಶಿ ನಗರ ವಿಶಿಷ್ಟವಾದ ಕ್ಷೇತ್ರ. ಈ ಕ್ಷೇತ್ರಕ್ಕೂ ನನಗೂ ಅವಿನಾಭಾವ ಸಂಬಂಧ ಇದೆ. ಎಷ್ಟೋ ಸಂದರ್ಭದಲ್ಲಿ ಇಲ್ಲಿನ ಎಲ್ಲಾ ರಸ್ತೆಗಳಲ್ಲಿ ಸಂಚರಿಸಿ ಜನರನ್ನು ಭೇಟಿಯಾಗಿದ್ದೇನೆ. ಹೀಗಾಗಿ ಪಕ್ಷವನ್ನು ಸಂಘಟಿಸುವುದು ಸವಾಲಿನ ಕೆಲಸವಲ್ಲ. ಅಖಂಡ ಶ್ರೀನಿವಾಸ ಮೂರ್ತಿ ಸಮರ್ಥವಾಗಿ ಕಾರ್ಯಕರ್ತರನ್ನು ಸಂಘಟಿಸಲಿದ್ದಾರೆ ಎಂದು ಹೇಳಿದರು.

ಯಾರದೋ ಮಾತು ಕೇಳಿ ಹೊರಗೆ ಹೋಗಿದ್ದೆ:

ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮಾತನಾಡಿ, ಜೆಡಿಎಸ್ ಪಕ್ಷಕ್ಕೆ ನಾನು ಹೊರಗಿನವನಲ್ಲ. ಯಾರದೋ ಮಾತು ಕೇಳಿ ಹೊರಕ್ಕೆ ಹೋಗಬೇಕಾಯಿತು. ಅದರಿಂದ ಉಂಟಾದ ಕಷ್ಟಗಳೇನು ಎಂಬುದು ನನಗೆ ಅರಿವಾಗಿದೆ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ನನ್ನ ನಾಯಕರು. ಅವರಲ್ಲಿ ವಿಶ್ವಾಸವಿರಿಸಿ ಜೆಡಿಎಸ್ ಸೇರಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಗಾಗಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುತ್ತೇನೆ.2028ಕ್ಕೆ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಆಗಬೇಕು ಎಂದು ಮನದಿಂಗಿತ ವ್ಯಕ್ತಪಡಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಮನಸ್ಸಿನ ಏಕತೆಗೆ ಯೋಗ ಅಗತ್ಯ : ಗೆಹ್ಲೋತ್‌
ಅಡ್ಡಮತ: ವರಿಷ್ಠರ ಭೇಟಿಗೆ ಬಿವೈವಿ, ಅಶೋಕ್‌ ದೆಹಲಿಗೆ