ಅಕ್ರಮ ದನ ಸಾಗಣೆ ವಾಹನ ಬಿಡುಗಡೆಗೆ ಖಾತ್ರಿ ಅನಗತ್ಯ- ಜಾನುವಾರು ಹತ್ಯೆ ಪ್ರತಿಬಂಧಕ ಬಿಲ್‌ಗೆ ತಿದ್ದುಪಡಿ

Published : Dec 05, 2025, 05:31 AM IST
Cow

ಸಾರಾಂಶ

 ಅನಧಿಕೃತ ಜಾನುವಾರು ಸಾಗಣೆ ಸಮಯದಲ್ಲಿ ವಶಪಡಿಸಿಕೊಂಡ ವಾಹನಗಳನ್ನು ‘ಬ್ಯಾಂಕ್‌ ಖಾತರಿ’ ಬದಲು ‘ನಷ್ಟ ಭರ್ತಿ ಮುಚ್ಚಳಿಕೆ’  ನೀಡಿ ಬಿಡಿಸಿಕೊಳ್ಳಲು ಅನುವಾಗುವಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ- 2020ಕ್ಕೆ ತಿದ್ದುಪಡಿ ತರಲು   ನಿರ್ಧರಿಸಲಾಗಿದೆ.

  ಬೆಂಗಳೂರು :  ರಾಜ್ಯದಲ್ಲಿ ಅನಧಿಕೃತ ಜಾನುವಾರು ಸಾಗಣೆ ಸಮಯದಲ್ಲಿ ವಶಪಡಿಸಿಕೊಂಡ ವಾಹನಗಳನ್ನು ‘ಬ್ಯಾಂಕ್‌ ಖಾತರಿ’ ಬದಲು ‘ನಷ್ಟ ಭರ್ತಿ ಮುಚ್ಚಳಿಕೆ’ (ಇಂಡೆಮ್ನಿಟಿ ಬಾಂಡ್) ನೀಡಿ ಬಿಡಿಸಿಕೊಳ್ಳಲು ಅನುವಾಗುವಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ- 2020ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬ್ಯಾಂಕ್‌ ಖಾತರಿ ನೀಡುವುದು ಕಡ್ಡಾಯವಾಗಿತ್ತು

ಈಗ ಇರುವ ನಿಯಮದ ಪ್ರಕಾರ ಜಾನುವಾರುಗಳ ಅನಧಿಕೃತ ಸಾಗಣೆ ವೇಳೆ ಸಿಕ್ಕಿಬಿದ್ದ ವಾಹನಗಳನ್ನೂ ಬ್ಯಾಂಕ್‌ ಗ್ಯಾರಂಟಿ ನೀಡಿ ಮಾತ್ರ ಬಿಡಿಸಿಕೊಳ್ಳಬೇಕು. 3 ರಿಂದ 5 ಲಕ್ಷ ರು. ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯದ ಬ್ಯಾಂಕ್‌ ಖಾತರಿ ನೀಡುವುದು ಕಡ್ಡಾಯವಾಗಿತ್ತು. ಇದರಿಂದ ಸಣ್ಣಪುಟ್ಟ ವಾಹನ ಮಾಲೀಕರಿಗೆ ಸಮಸ್ಯೆಯಾಗುತ್ತಿತ್ತು. ವಾಹನಗಳ ಬಾಡಿಗೆಯಿಂದಲೇ ಜೀವನ ನಡೆಸುತ್ತಿರುವ ಕುಟುಂಬಗಳಿಗೆ ಕಷ್ಟವಾಗುತ್ತದೆ ಎಂಬ ಕಾರಣದಿಂದ ವಿಧೇಯಕಕ್ಕೆ ತಿದ್ದುಪಡಿ ತರಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ.

ಇಂಡೆಮ್ನಿಟಿ ಗ್ಯಾರಂಟಿ ನೀಡಿ ಬಿಡುಗಡೆ ಮಾಡಬಹುದು ಎಂದು ಹೇಳಿತ್ತು ಹೈಕೋರ್ಟ್‌

ಹೈಕೋರ್ಟ್‌ 2022ರಲ್ಲಿ ಪ್ರಕರಣವೊಂದರಲ್ಲಿ ಬ್ಯಾಂಕ್‌ ಗ್ಯಾರಂಟಿ ಬದಲು ಇಂಡೆಮ್ನಿಟಿ ಗ್ಯಾರಂಟಿ ನೀಡಿ ವಾಹನ ಬಿಡುಗಡೆ ಮಾಡಬಹುದು ಎಂದು ಹೇಳಿತ್ತು. ಹೀಗಾಗಿ ನಷ್ಟ ಪರಿಹಾರ ಅಥವಾ ನಷ್ಟ ಭರ್ತಿ ಮುಚ್ಚಳಿಕೆ (ಬಾಂಡ್) ನೀಡುವ ಮೂಲಕವೂ ವಾಹನ ಬಿಡಿಸಿಕೊಳ್ಳಬಹುದು. ಹೀಗಾಗಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ-2020ರಲ್ಲಿ ‘ಬ್ಯಾಂಕ್ ಖಾತರಿ’ ಎಂಬ ಪದ ಎಲ್ಲೆಲ್ಲಿ ಬರುವುದೋ ಆ ಪದದ ನಂತರ ‘ಅಥವಾ ನಷ್ಟ ಪರಿಹಾರ ಬಾಂಡ್’ ಎಂದು ತಿದ್ದುಪಡಿ ತರಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಈ ಸರ್ಕಾರದಲ್ಲಿ 63% ಕಮಿಷನ್‌: ಅಶೋಕ್‌
63 ಪರ್ಸೆಂಟ್‌ ಭ್ರಷ್ಟಾಚಾರ ಬಿಜೆಪಿ ಕಾಲದ್ದು, ಅಶೋಕ್‌ಗೆ ಅರ್ಥವಾಗೇ ಇಲ್ಲ: ಸಿಎಂ