ಮೈತ್ರಿ ಅಭ್ಯರ್ಥಿ ನಾರಾಯಣಸ್ವಾಮಿ ಬೆಂಬಲಿಸಲು ಮನವಿ

KannadaprabhaNewsNetwork |  
Published : May 29, 2024, 01:01 AM IST
ಶಿರ್ಷಿಕೆ-೨೮ಕೆ.ಎಂ.ಎಲ್.ಅರ್.೩- ಮಾಲೂರು ಪಟ್ಟಣದ ಬಿ ಜಿ ಎಸ್ ವಿದ್ಯಾ ಸಂಸ್ಥೆ, ಮಂಜುನಾಥ ವಿದ್ಯಾ ಸಂಸ್ಥೆ ಸೇರಿದಂತೆ ಪಟ್ಟಣದ ಪ್ರೌಢಶಾಲೆಗೆ ಭೇಟಿ ನೀಡಿ ಬಿಜೆಪಿ ಜೆಡಿಎಸ್ ಮೈತ್ರಿ ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ವೈ ಎ ನಾರಾಯಣಸ್ವಾಮಿ ಅವರ ಪರವಾಗಿ ತಾಲೂಕು ಬಿಜೆಪಿ ಪಕ್ಷದ ವತಿಯಿಂದ ಮತಯಾಚನೆ ನಡೆಸಿದರು. | Kannada Prabha

ಸಾರಾಂಶ

ಬಿಜೆಪಿ-ಜೆಡಿಎಸ್ ಸರ್ಕಾರದಲ್ಲಿ ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದು ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಕೆ, ಕಟ್ಟಡ ನಿರ್ಮಾಣ, ಶಿಕ್ಷಕರ ಸಮಸ್ಯೆ ಹಾಗೂ ಅನುದಾನಿತ ಶಾಲೆಗಳ ಸಮಸ್ಯೆ ಬಗೆ ಹರಿಸಿದೆ.

ಕನ್ನಡಪ್ರಭ ವಾರ್ತೆ,ಮಾಲೂರು

ರಾಜ್ಯದ ಶಿಕ್ಷಕರ ಹಲವಾರು ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿರುವ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಲೆ ಇರುವುದರಿಂದ ಹಾಲಿ ಸದಸ್ಯ ವೈ.ಎ.ನಾರಾಯಣಸ್ವಾಮಿ ಗೆಲ್ಲುವುದು ಶತಸಿದ್ಧ. ತಾಲೂಕಿನ ಪ್ರೌಢಶಾಲಾ ಶಿಕ್ಷಕರು ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಬಿಜೆಪಿ ತಾಲೂಕು ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ ಮನವಿ ಮಾಡಿದರು.ಪಟ್ಟಣದ ಬಿಜಿಎಸ್ ವಿದ್ಯಾ ಸಂಸ್ಥೆ, ಮಂಜುನಾಥ ವಿದ್ಯಾ ಸಂಸ್ಥೆ ಸೇರಿದಂತೆ ಪಟ್ಟಣದ ಪ್ರೌಢಶಾಲೆಗೆ ಭೇಟಿ ನೀಡಿ ಬಿಜೆಪಿ ಜೆಡಿಎಸ್ ಮೈತ್ರಿ ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ವೈ ಎ ನಾರಾಯಣಸ್ವಾಮಿ ಅವರ ಪರವಾಗಿ ತಾಲೂಕು ಅವರು ಮತಯಾಚಿಸಿದರು.

ಶಿಕ್ಷಕರು ಬೆಂಬಲಿಸುವ ವಿಶ್ವಾಸ

ಕಳೆದ ೧೮ ವರ್ಷಗಳಿಂದಲೂ ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಗಲಿರುಳು ಕೆಲಸ ಮಾಡಿದ್ದು, ಒಂದು ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ, ೨ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ವೈ.ಎ.ನಾರಾಯಣಸ್ವಾಮಿ ಅವರು ಈಗ ನಾಲ್ಕನೇ ಬಾರಿ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ತಾಲೂಕಿನಲ್ಲಿ ಪ್ರೌಢಶಾಲಾ ಶಿಕ್ಷಕರು ಕೈ ಬಿಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.

ಬಿಜೆಪಿ-ಜೆಡಿಎಸ್ ಸರ್ಕಾರದಲ್ಲಿ ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದು ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಕೆ, ಶಾಲಾ ಕಟ್ಟಡ ನಿರ್ಮಾಣ, ವಿವಿಧ ಶಾಲೆಗಳಿಗೆ ಭೇಟಿ ಹಲವಾರು ಜ್ವಲಂತ ಶಿಕ್ಷಕರ ಸಮಸ್ಯೆ ಬಗೆ ಹರಿಸಿದ್ದು ಅನುದಾನಿತ ಶಾಲೆಗಳ ಸಮಸ್ಯೆ ಬಗೆ ಹರಿಸಿದೆ. ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಬಗೆ ಹರಿಸಿರುವುದು ಕಳೆದ ೧೮ ವರ್ಷಗಳಿಂದಲೂ ಶಿಕ್ಷಕರ ಒಡನಾಡಿಯಾಗಿ ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ನಾರಾಯಣಸ್ವಾಮಿ ಶ್ರಮಿಸಿದ್ದಾರೆ ಎಂದು ಹೇಳಿದರು.

7ನೇ ವೇತನ ಆಯೋಗ ವರದಿ

ಈಗಾಗಲೇ ಬೆಳಗಾವಿ ಅಧಿವೇಶನದಲ್ಲಿ ೭ ನೇ ವೇತನ ಆಯೋಗ ವರದಿ ಜಾರಿ ಮಾಡುವಂತೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು ಮುಂದಿನ ದಿನಗಳಲ್ಲಿ ಶಿಕ್ಷಕರ ಇನ್ನೂ ಹಲವಾರು ಸಮಸ್ಯೆಗಳಿಗೆ ಸ್ಪಂದಿಸಲು ನಾಲ್ಕನೇ ಬಾರಿ ಆಗ್ನೆಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಒಕ್ಕೂಟದ ಅಭ್ಯರ್ಥಿಯಾಗಿರುವ ವೈ.ಎ.ನಾರಾಯಣಸ್ವಾಮಿಯನ್ನು ಆಯ್ಕೆ ಮಾಡುವಂತೆ ಕೋರಿದರು. ರೈತ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಬೆಳ್ಳಾವಿ ಸೋಮಣ್ಣ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರ ಚಿನ್ನಸ್ವಾಮಿ ಸ್ವಾಮಿ ಗೌಡ, ಪುರಸಭೆ ಸದಸ್ಯರಾದ ಅನಿತಾ ನಾಗರಾಜ್, ಬಿಜೆಪಿ ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪದ್ಮಾವತಿ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂತೋಷ್, ಖಜಾಂಚಿ, ವೇಣುಗೋಪಾಲ್, ಇನ್ನಿತರಿದ್ದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ