ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಪತಿ ಈ.ತುಕಾರಾಂ ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದು ಲೋಕಸಭೆ ಪ್ರವೇಶಿಸಿದರು. ಇದೀಗ ಉಪ ಚುನಾವಣೆಯಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣ ಗೆಲುವು ಪಡೆದು ವಿಧಾನಸಭೆ ಪ್ರವೇಶ ಪಡೆದಿದ್ದಾರೆ.
ಬಳ್ಳಾರಿ : ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಪತಿ ಈ.ತುಕಾರಾಂ ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದು ಲೋಕಸಭೆ ಪ್ರವೇಶಿಸಿದರು. ಇದೀಗ ಉಪ ಚುನಾವಣೆಯಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣ ಗೆಲುವು ಪಡೆದು ವಿಧಾನಸಭೆ ಪ್ರವೇಶ ಪಡೆದಿದ್ದಾರೆ.
ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಪತಿ-ಪತ್ನಿ ಲೋಕಸಭೆ ಹಾಗೂ ವಿಧಾನಸಭೆಗೆ ಪ್ರವೇಶ ಪಡೆದ ಮೊದಲಿಗರಾಗಿದ್ದಾರೆ. ಅಷ್ಟೇ ಅಲ್ಲ, ಅನ್ನಪೂರ್ಣ ಅವರು ಸಂಡೂರು ವಿಧಾನಸಭಾ ಕ್ಷೇತ್ರದಿಂದ ಗೆದ್ದು ಬೀಗಿದ ಮೊದಲ ಮಹಿಳೆ ಎಂಬ ಕೀರ್ತಿಗೂ ಪಾತ್ರರಾಗಿದ್ದಾರೆ.
ಸಂಡೂರು ಉಪ ಚುನಾವಣೆ ವೇಳೆ ಕೇಳಿ ಬಂದ ಕುಟುಂಬ ರಾಜಕಾರಣದ ಆರೋಪಕ್ಕೆ ಕ್ಷೇತ್ರದ ಮತದಾರರು ತಲೆಕೆಡಿಸಿಕೊಂಡಿಲ್ಲ. ಎಂದಿನಂತೆ ಕೈ ಅಭ್ಯರ್ಥಿಯನ್ನು ಕೈ ಹಿಡಿದಿದ್ದಾರೆ. ಸತತ ನಾಲ್ಕು ಬಾರಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಗೆಲುವು ದಾಖಲಿಸಿದ್ದ ಈ.ತುಕಾರಾಂ, ಪತ್ನಿಯನ್ನು ವಿಧಾನಸಭೆಗೆ ಕರೆದೊಯ್ಯುವಲ್ಲಿ ಯಶಸ್ವಿಯಾಗಿದ್ದಾರೆ.