ಅಂತೂ 428 ಮಂದಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿಗಮ ಹುದ್ದೆ

Published : Nov 12, 2026, 06:59 AM IST
congress

ಸಾರಾಂಶ

ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿವಿಧ 111 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಒಟ್ಟು 428 ಮಂದಿ ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು : ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿವಿಧ 111 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಒಟ್ಟು 428 ಮಂದಿ ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ತನ್ಮೂಲಕ ಕಾಂಗ್ರೆಸ್‌ ಕಾರ್ಯಕರ್ತರಿಗೆ ದೀಪಾವಳಿ ಹಬ್ಬದ ಕೊಡುಗೆ ನೀಡಿದೆ. ಬೆಸ್ಕಾಂ, ಹೆಸ್ಕಾಂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್), ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ, ಕರ್ನಾಟಕ ಗೃಹ ಮಂಡಳಿ, ಕೆಪಿಟಿಸಿಎಲ್, ಕಿಯೋನಿಕ್ಸ್‌, ಕೆಎಸ್‌ಆರ್‌ಟಿಸಿ, ವಾಲ್ಮೀಕಿ ಅಭಿವೃದ್ಧಿ ನಿಗಮ, ವಕ್ಫ್‌ ಮತ್ತು ವಿವಿಧ ಸಮುದಾಯ ಅಭಿವೃದ್ಧಿ ನಿಗಮ, ವಿವಿಧ ಅಭಿವೃದ್ದಿ ಪ್ರಾಧಿಕಾರಗಳು ಸೇರಿದಂತೆ 111 ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ 428 ಮಂದಿಯ ನೇಮಕ ಅಂತಿಮಗೊಳಿಸಲಾಗಿದೆ.

ಡಿ.ಕೆ. ಶಿವಕುಮಾರ್‌ ಅವರ ಟಿಪ್ಪಣಿ ಅನುಮೋದನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಟಿಪ್ಪಣಿ ಅನುಮೋದನೆ ಪ್ರಕಾರ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಆಡಳಿತಾತ್ಮಕ ಕಾರ್ಯಚಟುವಟಿಕೆ ಚುರುಕುಗೊಳಿಸುವ ನಿಟ್ಟಿನಲ್ಲಿ ಪ್ರಮುಖ ನಿಗಮ-ಮಂಡಳಿಗಳಿಗೆ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರನ್ನು ನಿರ್ದೇಶಕ, ಸದಸ್ಯ ಸ್ಥಾನಕ್ಕೆ ನೇಮಿಸಲಾಗಿದೆ.

ಈ ಕುರಿತು ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ವಿವಿಧ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶದ ಮೂಲಕ ಸೂಚನೆ ನೀಡಿದೆ. ಇದರ ಆಧಾರದ ಮೇಲೆ ನಿಗಮ-ಪ್ರಾಧಿಕಾರಗಳು ಅಧಿಕೃತವಾಗಿ ನೇಮಕಾತಿ ಆದೇಶಗಳನ್ನು ಹೊರಡಿಸುವ ಪ್ರಕ್ರಿಯೆ ಆರಂಭಿಸಿವೆ ಎಂದು ಮೂಲಗಳು ತಿಳಿಸಿವೆ.

2 ದಿನದಲ್ಲಿ ನಿಗಮ ಅಧ್ಯಕ್ಷರ ನೇಮಕ

ಇನ್ನೆರಡು ದಿನಗಳಲ್ಲಿ ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕಾತಿ ಪಟ್ಟಿ ಬಿಡುಗಡೆ ಮಾಡಲಾಗುವುದು. ಇದರಲ್ಲಿ ಕೆಲವು ಶಾಸಕರಿಗೂ ಸ್ಥಾನಮಾನ ಕೊಡಬೇಕಿದೆ. ಖಂಡಿತವಾಗಿಯೂ ಕೊಡುತ್ತೇವೆ.

- ಡಿ.ಕೆ. ಶಿವಕುಮಾರ್‌, ಮುಖ್ಯಮಂತ್ರಿ

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ರಾಜ್ಯದ ಎಲ್ಲ ರೈತರಿಗೂ 5000 ರು. ಬರ ಪರಿಹಾರ
ಸೋನಿಯಾ ರಹಸ್ಯಗಳು - ಆತ್ಮಕತೆ ‘ಬಿಲಾಂಗಿಂಗ್‌: ಎ ಜರ್ನಿ ಆಫ್‌ ಲವ್’