;Resize=(412,232))
ಬೆಂಗಳೂರು : ಬೆಂಗಳೂರಿನ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರದ ಸಮೀಪ ಬದಲು ತುಮಕೂರು ಸುತ್ತಮುತ್ತ ಸ್ಥಾಪಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.
ತುಮಕೂರಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದರೆ ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ ಮತ್ತು ಹಳೆ ಮೈಸೂರು ಭಾಗಗಳ ಜನತೆಗೆ ಸಮಾನ ಅನುಕೂಲ ಆಗುತ್ತದೆ. ಕನಕಪುರ ರಾಜ್ಯದ ದಕ್ಷಿಣ ತುದಿಯಲ್ಲಿದ್ದು, ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಅದರ ಪ್ರಯೋಜನ ಸೀಮಿತ ಪ್ರದೇಶಕ್ಕಷ್ಟೇ ಸಿಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಕನಕಪುರದಲ್ಲಿ ತಮ್ಮ ಜಮೀನಿನ ಬೆಲೆ ಹೆಚ್ಚಾಗಬೇಕು, ಅಲ್ಲಿ ತಮ್ಮ ಕಂಪನಿಗಳೂ ಬರಬೇಕೆಂಬ ಆಲೋಚನೆಯನ್ನು ಬದಿಗಿಟ್ಟು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ರಾಜ್ಯದ ಒಳಿತಿಗಾಗಿ ತುಮಕೂರು ಅಕ್ಕಪಕ್ಕದಲ್ಲಿ ಸ್ಥಾಪಿಸುವಂತೆ ಕೈ ಜೋಡಿಸಿ ಪ್ರಾರ್ಥಿಸುತ್ತೇನೆ. ಇದರಿಂದ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಪ್ರಯೋಜನ ಆಗಲಿದೆ ಎಂದು ತಿಳಿಸಿದ್ದಾರೆ.