ವಿಧಾನಸೌಧ : ಬಾಬು ಜಗ ಜೀವನ್ ರಾಮ್ ಅಪ್ರತಿಮ ನಾಯಕ - ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ

KannadaprabhaNewsNetwork |  
Published : Apr 06, 2025, 01:46 AM ISTUpdated : Apr 06, 2025, 07:36 AM IST
ವಿಧಾನಸೌಧ ಆವರಣದಲ್ಲಿರುವ ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ. ಪರಮೇಶ್ವರ್, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಮ್ ಅವರು ದೇಶ ಕಂಡ ಅಪ್ರತಿಮ ನಾಯಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು : ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಮ್ ಅವರು ದೇಶ ಕಂಡ ಅಪ್ರತಿಮ ನಾಯಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯಿಂದ ವಿಧಾನಸೌಧದ ಪಶ್ಚಿಮದ್ವಾರದ ಬಳಿ ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅವರು, ದಮನಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದರು. ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಅನೇಕ ಇಲಾಖೆಗಳನ್ನು ನಿಭಾಯಿಸಿದರು. ಕೃಷಿ, ರಕ್ಷಣೆ ಸೇರಿದಂತೆ ಯಾವುದೇ ಇಲಾಖೆಯಲ್ಲಿದ್ದರೂ ದಕ್ಷತೆಯಿಂದ ಕಾರ್ಯ ನಿರ್ವಹಿಸಿದರು. ಅವರು ತಮ್ಮ ಹೆಜ್ಜೆ ಗುರುತುಗಳನ್ನು ಬಿಟ್ಟುಹೋಗಿದ್ದಾರೆ ಎಂದರು.

ಮಹಾನ್ ನಾಯಕರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ, ದೇಶದ ಉದ್ಧಾರದಲ್ಲೇ ನಮ್ಮ ಉದ್ಧಾರ ಹಾಗೂ ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ ಎಂದು ಹೇಳಿದ್ದ ಜಗಜೀವನ್ ರಾಮ್ ಅವರು ಅಪ್ರತಿಮ ದೇಶಭಕ್ತ ಆಗಿದ್ದರು. ದೇಶದ ಮಾದರಿ ನಾಯಕನ ಜನ್ಮದಿನೋತ್ಸವದಂದು ಅವರಿಗೆ ನಮನಗಳನ್ನು ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಮತಚೋರಿ ಹೆಸರಲ್ಲಿ ಸುಳ್ಳು ಪ್ರಚಾರ ತಪ್ಪು: ದೇವೇಗೌಡ
ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು