ಬೆಂಗಳೂರು ಅರಮನೆ ವಶ ವಿಚಾರ : ಮೈಸೂರು ರಾಜಮನೆತನದ ವಿರುದ್ಧ ರಾಜ್ಯ ಸರ್ಕಾರದ ಸಮರ !

Published : Jan 17, 2025, 08:13 AM IST
Vidhan soudha

ಸಾರಾಂಶ

ಮೈಸೂರು ರಾಜಮನೆತನ, ರಾಜ್ಯ ಸರ್ಕಾ ರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಟಿಡಿಆರ್ ಪರಿಹಾರ ನೀಡಲು ವಿಳಂಬ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದ ಮೈಸೂರು ರಾಜಮನೆತನದ ಮೇಲೆ ರಾಜ್ಯ ಸರ್ಕಾರದಿಂದ ಸಾಲು ಸಾಲು ಕಠಿಣ ಕ್ರಮ 

ಬೆಂಗಳೂರು : ಮೈಸೂರು ರಾಜಮನೆತನ, ರಾಜ್ಯ ಸರ್ಕಾ ರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಟಿಡಿಆರ್ ಪರಿಹಾರ ನೀಡಲು ವಿಳಂಬ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದ ಮೈಸೂರು ರಾಜಮನೆತನದ ಮೇಲೆ ರಾಜ್ಯ ಸರ್ಕಾರದಿಂದ ಸಾಲು ಸಾಲು ಕಠಿಣ ಕ್ರಮ ಕೈಗೊಳ್ಳಲು ಗುರುವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಬೆಂಗಳೂರು ಅರಮನೆ ವಶಪಡಿಸಿಕೊಂಡಿರುವ 1997ರ ಬೆಂಗಳೂರು ಅರಮನೆ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ ಯ ಸಿಂಧುತ್ವ ಎತ್ತಿ ಹಿಡಿಯಲು ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರದಿಂದ ಕಿರುಕುಳ : ಹೆಚ್‌ಡಿಕೆ ಗಂಭೀರ ಆರೋಪ

ಅರಮನೆ ಮೈದಾನದ ಮಾಲೀಕತ್ವ ಕುರಿತ ಮೂಲ ದಾವೆ ಇತ್ಯರ್ಥವಾದ ಬಳಿಕ ಟಿಡಿಆರ್ ಪರಿಹಾರ ನೀಡುವ ಬಗ್ಗೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಈಗಾಗಲೇ ರಾಜ್ಯ ಸರ್ಕಾರ ಈ ಕುರಿತು ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಅರ್ಜಿ ಪರಿಗಣಿಸಿ ತುರ್ತು ವಿಚಾರಣೆಗೆ ಕೈಗೆತ್ತಿಕೊಂಡು ಪ್ರಕರಣ ಇತ್ಯರ್ಥಪಡಿಸಬೇಕು ಎಂದು ಕೋರಲು ತೀರ್ಮಾನಿಸಲಾಗಿದೆ. ಅಲ್ಲದೆ ಇದೇ ಪ್ರಕರಣದಲ್ಲಿ 2001ರಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು.

3 ದಶಕಗಳ ವಿವಾದ

* 1996-9700 ರಾಮಯ್ಯ ಡಿಸಿಎಂ ಆಗಿದ್ದಾಗ ಬೆಂಗಳೂರು ಅರಮನೆ, ಮೈಸೂರು ಅರಮನೆ ಸ್ವಾಧೀನಕ್ಕೆ ಕಾಯ್ದೆ ಅಂಗೀಕಾರ

* ಹೈಕೋರ್ಟ್‌ಲ್ಲಿ ಸರ್ಕಾ ರಕ್ಕೆ ಜಯ. ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ರಾಜಮನೆತನ. 2001 ರಲ್ಲಿ ಯಥಾಸ್ಥಿತಿಗೆ ಸುಪ್ರೀಂ ಆದೇಶ

* ಬೆಂಗಳೂರಿನ ಬಳ್ಳಾರಿ, ಜಯಮಹಲ್ ರಸ್ತೆಗಳ ಅಗಲೀಕರಣಕ್ಕೆ ರಾಜ ಮನೆತನಕ್ಕೆ ಸೇರಿದ 15.7 ಎಕರೆ ಜಾಗವನ್ನು ಬಳಸಿದ್ದ ರಾಜ್ಯ ಸರ್ಕಾರ

* ಟಿಡಿಆರ್ ಪರಿಹಾರ ರೂಪ ದಲಿ 3011 ಕೋಟಿ ರುಪಾಯಿ ನೀಡಲು 2014ರಲ್ಲಿ ಹೈಕೋರ್ಟ್ ತೀರ್ಪು.

* ಸರ್ಕಾರದ ಮೇಲ್ಮನವಿ ವಜಾ ಪರಿಹಾರಕ್ಕಾಗಿ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವ ರಾಜಮನೆತನ. ಸರ್ಕಾರಿ ಅಧಿಕಾರಿಗಳಿಗೆ ನೋಟಿಸ್‌

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ