ಸಹಿಗಾಗಿ ಬಸನಗೌಡ ಪಾಟೀಲ್‌ ಯತ್ನಾಳ್‌ ಕೂಡ ಡಿಕೆಶಿ ಬಳಿ ಬರ್ತಾರೆ : ಡಿ.ಕೆ.ಸುರೇಶ್‌

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತ್ರವಲ್ಲದೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕೂಡ ಕಡತಗಳಿಗೆ ಸಹಿ ಹಾಕಿಸಿಕೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಳಿ ಬರುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತ್ರವಲ್ಲದೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕೂಡ ಕಡತಗಳಿಗೆ ಸಹಿ ಹಾಕಿಸಿಕೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಳಿ ಬರುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯೇಂದ್ರ ಮತ್ತು ಶಿವಕುಮಾರ್‌ ಆತ್ಮೀಯತೆ ಹೊಂದಿದ್ದಾರೆ ಎಂದು ಯತ್ನಾಳ್‌ ಹೇಳಿದ್ದಾರೆ. ವಿಜಯೇಂದ್ರ ಮಾತ್ರವಲ್ಲದೆ ಯತ್ನಾಳ್‌ ಕೂಡ ಡಿ.ಕೆ.ಶಿವಕುಮಾರ್‌ ಜತೆಗೆ ಆತ್ಮೀಯವಾಗಿದ್ದಾರೆ. ಅವರೂ ಕೆಲವೊಮ್ಮೆ ಕಡತಗಳಿಗೆ ಸಹಿ ಹಾಕಿಸಿಕೊಳ್ಳಲು ಶಿವಕುಮಾರ್‌ ಬಳಿ ಬರುತ್ತಾರೆ ಎಂದು ತಿಳಿಸಿದರು.

ವಿಜಯೇಂದ್ರ ಹಾಗೂ ಶಿವಕುಮಾರ್‌ ನಡುವೆ ಹೊಂದಾಣಿಕೆ ರಾಜಕೀಯದ ದಾಖಲೆಯಿದೆ ಎಂದು ಯತ್ನಾಳ್‌ ಹೇಳಿದ್ದಾರೆ. ಅಂಥ ದಾಖಲೆಗಳಿದ್ದರೆ ಅವರು ಬಿಡುಗಡೆ ಮಾಡಲಿ. ನಾವು ಬೇಡ ಎನ್ನುವುದಿಲ್ಲ. ಅವರೂ ಶಿವಕುಮಾರ್‌ ಭೇಟಿ ಮಾಡಿ ಉಭಯ ಕುಶಲೋಪರಿ ಮಾತನಾಡುತ್ತಾರೆ. ಆದರೂ ವಿಜಯೇಂದ್ರ ಬಗ್ಗೆ ಮಾತ್ರ ಏತಕ್ಕಾಗಿ ಹೇಳಿದ್ದಾರೆ ಗೊತ್ತಿಲ್ಲ. ಅದು ಅವರ ಆಂತರಿಕ ವಿಚಾರ ಎಂದರು.

Share this article