ಬಸವಣ್ಣನವರ ಭಾವಚಿತ್ರಕ್ಕೆ ಬೆಂಕಿ: ಬಂಧನಕ್ಕೆ ಆಗ್ರಹ

KannadaprabhaNewsNetwork | Published : Oct 17, 2023 12:30 AM

ಸಾರಾಂಶ

ಮಂಡ್ಯ:ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರದ ಕಲ್ಲಕಟ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ವಿರೂಪಗೊಳಿಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸುವಂತೆ ಲಿಂಗಾಯಿತ ಮಹಾಸಭಾ ಬಸವತತ್ವಗಳ ಜನಜಾಗೃತಿ ಸಂಘಟನೆ ಹಾಗೂ ಅಖಿಲ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ವಿದ್ಯಾರ್ಥಿ ಯುವಮೋರ್ಚಾ ಒತ್ತಾಯಿಸಿದೆ.
ಮಂಡ್ಯ:ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರದ ಕಲ್ಲಕಟ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ವಿರೂಪಗೊಳಿಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸುವಂತೆ ಲಿಂಗಾಯಿತ ಮಹಾಸಭಾ ಬಸವತತ್ವಗಳ ಜನಜಾಗೃತಿ ಸಂಘಟನೆ ಹಾಗೂ ಅಖಿಲ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ವಿದ್ಯಾರ್ಥಿ ಯುವಮೋರ್ಚಾ ಒತ್ತಾಯಿಸಿದೆ. ಲಿಂಗಾಯಿತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಎಸ್. ಮಂಜುನಾಥ್ ಹಾಗೂ ಅಖಿಲ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ವಿದ್ಯಾರ್ಥಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಪಿ. ಜೀವನ್ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಳೆದ ಅ. ೧೧ರಂದು ಮಾನವತಾವಾದಿ, ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಬೆಂಕಿ ಹಾಕಿ ವಿರೂಪಗೊಳಿಸಿರುವ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಜೀವವಾಧಿ ಶಿಕ್ಷೆ ವಿಧಿಸುವ ಮೂಲಕ ಬಸವಣ್ಣನವರ ಭಕ್ತರು, ಅನುಯಾಯಿಗಳಿಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ನಂದೀಶ, ಶಿವಪ್ರಸಾದ್, ನಾಗೇಶ್ ಇತರರು ಗೋಷ್ಠಿಯಲ್ಲಿದ್ದರು.

Share this article