ಜು.1ರಿಂದ ಬಿಬಿಎಂಪಿ ವ್ಯಾಪ್ತೀಲಿ ಮನೆ ಮನೆಗೆ ಇ-ಖಾತಾ ಅಭಿಯಾನ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

KannadaprabhaNewsNetwork |  
Published : Jun 30, 2025, 01:47 AM ISTUpdated : Jun 30, 2025, 09:20 AM IST
DK Krishna Byregowda | Kannada Prabha

ಸಾರಾಂಶ

‘ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ಸಾರ್ವಜನಿಕರ ಖಾಸಗಿ ಆಸ್ತಿ ರಕ್ಷಣೆಗೆ ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದಿದೆ.  

  ಬೆಂಗಳೂರು :  ‘ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ಸಾರ್ವಜನಿಕರ ಖಾಸಗಿ ಆಸ್ತಿ ರಕ್ಷಣೆಗೆ ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಿ ಸಾರ್ವಜನಿಕರ ಮನೆ ಬಾಗಿಲಿಗೆ ಖಾತಾ ನೀಡುವ ಕ್ರಾಂತಿಕಾರಿ ‘ಮನೆ ಮನೆಗೆ ಇ-ಖಾತಾ’ ಕಾರ್ಯಕ್ರಮಕ್ಕೆ ಪ್ರಾಯೋಗಿಕ ಚಾಲನೆ ನೀಡಿದ್ದೇವೆ’ ಎಂದು ಬೆಂಗಳೂರು ನಗರ ಅಭಿವೃದ್ಧಿ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. 

ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 25 ಲಕ್ಷ ಆಸ್ತಿಗಳಿದ್ದು, ಈ ಎಲ್ಲಾ ಆಸ್ತಿಗಳ ಡಿಜಿಟಲೀಕರಣಗೊಳಿಸಿ ನಿಮ್ಮ ಮನೆ ಬಾಗಿಲಿಗೆ ನೀಡುವಂತೆ ಕ್ರಾಂತಿಕಾರಿ ಬದಲಾವಣೆ ತರಲು ತೀರ್ಮಾನಿಸಿದ್ದೇನೆ. ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಕ ಬದಲಾವಣೆ ಮಾಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಚಾಲನೆ ನೀಡುತ್ತಿದ್ದೇವೆ. ಜನರ ಹಿತ, ಬದುಕು ಹಾಗೂ ಆಸ್ತಿ ರಕ್ಷಣೆಗಾಗಿ ಕೆಲಸ ಮಾಡುತ್ತೇವೆ ಎಂದೂ ಅವರು ಭರವಸೆ ನೀಡಿದ್ದಾರೆ.

ಬಿಬಿಎಂಪಿ ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರನಗರ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಇ ಖಾತಾ ಮೇಳ ಹಾಗೂ ಮನೆ ಮನೆಗೆ ಇ-ಖಾತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜುಲೈ 1ರಿಂದ ಒಂದು ತಿಂಗಳ ಕಾಲ ಇ-ಖಾತಾ ಅಭಿಯಾನ ನಡೆಯಲಿದೆ. ಈ ಅಭಿಯಾನದಲ್ಲಿ ಜನರು ಭಾಗವಹಿಸಿ ತಮ್ಮ ಆಸ್ತಿ ಇ-ಖಾತೆ ಮಾಡಿಸಿಕೊಂಡು ವಂಚನೆಯಿಂದ ತಪ್ಪಿಸಿಕೊಳ್ಳಬಹುದು. ನಂತರ ಬೆಂಗಳೂರಿನ ಎಲ್ಲಾ ವಾರ್ಡ್‌ಗಳಲ್ಲೂ ಇಂತಹ ಕಾರ್ಯಕ್ರಮ ಮಾಡುತ್ತೇವೆ.

ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 25 ಲಕ್ಷ ಆಸ್ತಿಗಳಿದ್ದು, ಈ ಎಲ್ಲಾ ಆಸ್ತಿಗಳ ಡಿಜಿಟಲಿಕರಣಗೊಳಿಸಿ ನಿಮ್ಮ ಮನೆ ಬಾಗಿಲಿಗೆ ನೀಡುವಂತೆ ಕ್ರಾಂತಿಕಾರಿ ಬದಲಾವಣೆ ತರಲು ತೀರ್ಮಾನಿಸಿದ್ದೇನೆ. ನೀವು ನಿಮ್ಮ ಆಸ್ತಿ ದಾಖಲೆಗಳನ್ನು ಅಪ್ ಲೋಡ್ ಮಾಡಿ ಇ- ಖಾತಾ ಮಾಡಿಕೊಳ್ಳಿ. ಒಂದು ವೇಳೆ ನಿಮಗೆ ಇದು ಸಾಧ್ಯವಾಗದೆ ಇದ್ದರೆ ನಿಮಗೆ ನೀಡಲಾಗಿರುವ ದೂರವಾಣಿಗೆ ಕರೆ ಮಾಡಿ. ಅವರೇ ಬಂದು ನಿಮ್ಮ ದಾಖಲೆ ಅಪ್‌ಲೋಡ್ ಮಾಡಿ ಮನೆ ಬಾಗಿಲಿಗೆ ಇ-ಖಾತಾ ನೀಡುತ್ತಾರೆ ಎಂದು ಡಿ.ಕೆ.ಶಿವಕುಮಾರ್‌ ವಿವರಿಸಿದರು.

ಈವರೆಗೂ 5 ಲಕ್ಷ ಇ-ಖಾತಾ ವಿತರಣೆ:

ಪಾಲಿಕೆ ವ್ಯಾಪ್ತಿಯ 25 ಲಕ್ಷ ಆಸ್ತಿಗಳ ಪೈಕಿ 5 ಲಕ್ಷ ಆಸ್ತಿಗಳ ಕರಡು ಇ-ಖಾತಾ ವಿತರಣೆ ಮಾಡಲಾಗಿದೆ. ಬ್ಯಾಟರಾಯನಪುರ ಕ್ಷೇತ್ರದಲ್ಲಿ 50 ಸಾವಿರ ಮನೆಗಳಿಗೆ ಈ ಖಾತಾ ದಾಖಲೆ ವಿತರಣೆ ಮಾಡಲಾಗಿದೆ. ನಿಮ್ಮ ಗುರುತಿನ ಚೀಟಿಗೆ ಹೇಗೆ ಪ್ರತ್ಯೇಕ ಸಂಖ್ಯೆ ನೀಡಲಾಗಿದೆಯೋ ಅದೇ ರೀತಿ ನಿಮ್ಮ ಆಸ್ತಿಗಳಿಗೂ ಪ್ರತ್ಯೇಕ ಸಂಖ್ಯೆ ನೀಡಲು ನಿಮ್ಮ ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಉಳುವವನಿಗೆ ಭೂಮಿ ಕೊಟ್ಟಿದ್ದೇವೆ. ಖಾತಾ ಇಲ್ಲದವರಿಗೆ ಬಿ ಖಾತಾ ಕೊಟ್ಟಿದ್ದೇವೆ. ಬಗರ್ ಹುಕುಂ ಸಾಗುವಳಿ ರೈತರಿಗೆ ಭೂಮಿ ನೀಡಿದ್ದೇವೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಅಕ್ರಮ ಸಕ್ರಮ ಯೋಜನೆ ಮಾಡಿದ್ದೇವೆ. ಭೂಮಿ ಯೋಜನೆ ಮೂಲಕ ರೈತರಿಗೆ ಕೇವಲ 5 ರು.ಗೆ ಖಾತಾ ದಾಖಲೆ ನೀಡಿದ್ದೇವೆ. ತಾಂಡಾ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ ಮಾಡಿ 1,11,111 ಜನರಿಗೆ ಉಚಿತವಾಗಿ ದಾಖಲೆ ಪತ್ರ ನೀಡಿದ್ದೇವೆ. ಇದೀಗ ಬೆಂಗಳೂರಿನಲ್ಲೇ ಖಾತಾ ಕ್ರಾಂತಿ ಮಾಡುತ್ತಿದ್ದೇವೆ ಎಂದರು.

PREV
Read more Articles on

Recommended Stories

ನನ್ನ ವಿರುದ್ಧ ಮೂವರ ಪಿತೂರಿ - ಬಿಜೆಪಿ ಸೇರೋ ಬಗ್ಗೆ ಏನಂದ್ರು ರಾಜಣ್ಣ
ಆ.17ರಿಂದ ಕಾಂಗ್ರೆಸ್‌ ‘ಮತದಾರ ಅಧಿಕಾರ ಯಾತ್ರೆ’