ವೀರಶೈವ-ಲಿಂಗಾಯತರನ್ನು ಬೇರೆ ಮಾಡುವವರ ಕುರಿತು ಎಚ್ಚರವಾಗಿರಿ: ಈಶ್ವರ ಖಂಡ್ರೆ ಸೂಚನೆ

KannadaprabhaNewsNetwork |  
Published : Jul 13, 2026, 03:30 AM IST
Eshwar Khandre

ಸಾರಾಂಶ

ವೀರಶೈವ-ಲಿಂಗಾಯತರು ಬೇರೆ ಬೇರೆ ಎಂದು ಒಡಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ನಾವು ಎಚ್ಚರದಿಂದ ಇರಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.

 ಬೆಂಗಳೂರು :  ವೀರಶೈವ-ಲಿಂಗಾಯತರು ಬೇರೆ ಬೇರೆ ಎಂದು ಒಡಕು ಮೂಡಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ನಾವು ಎಚ್ಚರದಿಂದ ಇರಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.

ವಿಜಯನಗರದ ಸುಜ್ಞಾನ ಮಂದಿರದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ

ವಿಜಯನಗರದ ಸುಜ್ಞಾನ ಮಂದಿರದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕೆಲವರು ಸ್ವಾರ್ಥಕ್ಕಾಗಿ ಧರ್ಮ-ಧರ್ಮಗಳ ನಡುವೆ ಒಡಕು ಉಂಟು ಮಾಡುತ್ತಿದ್ದರೆ, ಮತ್ತೆ ಕೆಲವರು ಜಾತಿ-ಜಾತಿಗಳ ನಡುವೆ ವೈಮನಸ್ಯ ಹುಟ್ಟು ಹಾಕುವ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಸಮುದಾಯದವರು ಎಚ್ಚರದಿಂದ ಇರಬೇಕು ಎಂದರು.

ವೀರಶೈವ-ಲಿಂಗಾಯತರನ್ನು ಯಾವುದೇ ಶಕ್ತಿಯಿಂದ ಬೇರೆ ಮಾಡಲು ಸಾಧ್ಯವೇ ಇಲ್ಲ. ನಾವು ಎಂದೆಂದೂ ಒಂದೇ. ಸಂಘಟನೆಯಲ್ಲಿ ಬಲವಿದೆ, ವಿಘಟನೆಯಲ್ಲಿ ದೌರ್ಬಲ್ಯವಿದೆ ಎಂಬುದನ್ನು ನಾವು ಅರಿಯಬೇಕು. ನಾವು ಒಂದೇ ನಾಣ್ಯದ ಎರಡು ಮುಖ ಇದ್ದಂತೆ. ಇದನ್ನು ತುಮಕೂರು ಸಿದ್ದಗಂಗಾಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರೇ ಹೇಳಿದ್ದಾರೆ. ನಮ್ಮ ಸಮಾಜ ಅದನ್ನು ಪಾಲಿಸಬೇಕು ಎಂದು ತಿಳಿಸಿದರು.

ವಿದ್ಯಾವಂತ ಮತ್ತು ಬುದ್ಧಿವಂತರಷ್ಟೇ ಗೆಲ್ಲಲು ಸಾಧ್ಯ

ಈ ಸ್ಪರ್ಧಾತ್ಮಕ ಯುಗದಲ್ಲಿ, ಜ್ಞಾನಾಧಾರಿತ ಸಮಾಜದಲ್ಲಿ ವಿದ್ಯಾವಂತ ಮತ್ತು ಬುದ್ಧಿವಂತರಷ್ಟೇ ಗೆಲ್ಲಲು ಸಾಧ್ಯ. ನಮ್ಮ ಸಮಾಜದ ಯುವಜನರು ಬಾಹ್ಯ ಮೋಹಗಳಿಗೆ ಒಳಗಾಗದೆ ಶ್ರದ್ಧೆಯಿಂದ ಓದಿ, ಉನ್ನತ ಗುರಿ ಇಟ್ಟುಕೊಂಡು ಉದ್ಯಮಪತಿಗಳಾಗಿ ಉದ್ಯೋಗ ನೀಡುವವರಾಗಬೇಕೇ ಹೊರತು, ಉದ್ಯೋಗ ಬೇಡುವವರು ಆಗಬಾರದು ಎಂದು ಹೇಳಿದರು.

ಸರ್ವರಿಗೂ ಲೇಸನ್ನು ಬಯಸುವ ಸಮಾಜ ಯಾವುದಾದರೂ ಇದ್ದರೆ ಅದು ನಮ್ಮ ವೀರಶೈವ ಲಿಂಗಾಯತ ಸಮಾಜ ಮಾತ್ರ ಎಂದರು. ಸಮುದಾಯದ ನಿವೃತ್ತ ಐಎಎಸ್, ಐಪಿಎಸ್. ಕೆಎಎಸ್‌ ಅಧಿಕಾರಿಗಳು ಮತ್ತು ಉದ್ಯಮಿಗಳು ಸೇರಿ ಒಂದು ಟ್ರಸ್ಟ್ ರಚಿಸಿ ಜಿಲ್ಲೆಗೊಂದು ತರಬೇತಿ ಕೇಂದ್ರ ತೆರೆದು ಸಮಾಜದ ಆಕಾಂಕ್ಷಿಗಳಿಗೆ ತರಬೇತಿ ನೀಡಬೇಕೆಂದು ಮನವಿ ಮಾಡಿದರು.

ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಡಾ.ಶಿವಯೋಗೀಶ್ವರ ಸ್ವಾಮೀಜಿ, ವಿಭೂತಿಪುರ ಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸಿದ್ದರು.ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಬಿದರಿ, ಬೆಂಗಳೂರು ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ಮುಕ್ತಾಂಬಾ, ಕಲಬುರಗಿ ಮಾಜಿ ಮೇಯರ್ ಶರಣು ಮೋದಿ ಹಾಜರಿದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ದೇವಾಲಯ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌
ಪತ್ರಕರ್ತರು ತಂತ್ರಜ್ಞಾನದ ಜೊತೆಗೆ ಸಾಗಬೇಕು: ನಿರ್ಮಲಾನಂದನಾಥ ಶ್ರೀ