ಬಾಯಿಮುಚ್ಕೊಂಡಿದ್ರೆ ಒಳ್ಳೇದು : ಮೂವರು ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ವಾರ್ನಿಂಗ್

Published : Feb 23, 2026, 11:40 AM IST
DK Shivakumar

ಸಾರಾಂಶ

ಶಾಸಕರಾದ ಇಕ್ಬಾಲ್ ಹುಸೇನ್, ಗಣಿಗ ರವಿಕುಮಾರ್‌, ಶಿವಗಂಗಾ ಬಸವರಾಜ್‌ ಸೇರಿ ಕೆಲವರು ಬಾಯಿ ಮುಚ್ಚಿಕೊಂಡಿದ್ದರೆ ನನಗೆ ಒಳ್ಳೆಯದಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

  ಕಾರವಾರ :  ಶಾಸಕರಾದ ಇಕ್ಬಾಲ್ ಹುಸೇನ್, ಗಣಿಗ ರವಿಕುಮಾರ್‌, ಶಿವಗಂಗಾ ಬಸವರಾಜ್‌ ಸೇರಿ ಕೆಲವರು ಬಾಯಿ ಮುಚ್ಚಿಕೊಂಡಿದ್ದರೆ ನನಗೆ ಒಳ್ಳೆಯದಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಕಾರವಾರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಡಿಕೆಶಿ, ಸುದ್ದಿಗಾರರ ಜೊತೆ ಮಾತನಾಡಿದರು. ಅಧಿಕಾರ ಹಸ್ತಾಂತರ ಕುರಿತಂತೆ ಯಾವುದೇ ಹೇಳಿಕೆಗಳನ್ನು ಬಹಿರಂಗವಾಗಿ ನೀಡದೆ ಬಾಯಿ ಮುಚ್ಚಿಕೊಂಡಿರುವಂತೆ ತಮ್ಮ ಆಪ್ತ ಶಾಸಕರಿಗೆ ಖಡಕ್‌ ಸೂಚನೆ ನೀಡಿದರು. ಇದೇ ವೇಳೆ, ಶಾಸಕರ ವಿದೇಶ ಪ್ರವಾಸ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪ್ರವಾಸಕ್ಕೆ ಹೋದವರೆಲ್ಲ ನಮ್ಮವರೇ ಆಗಿದ್ದಾರೆ. ಅವರು ಮರಳಿದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದರು.

ಕರಾವಳಿ ಪ್ರವಾಸೋದ್ಯಮ ನೀತಿ

ಉತ್ತರ ಕನ್ನಡದ ಯುವಕರು ಉದ್ಯೋಗ ಅರಸಿ ಗೋವಾ, ಮುಂಬಯಿ ಅಥವಾ ವಿದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು, ಕರಾವಳಿಯ 334 ಕಿ.ಮೀ. ಉದ್ದದ ಪ್ರದೇಶದಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಹೊಸ ‘ಕರಾವಳಿ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರಲಾಗುತ್ತಿದೆ. ಇದರಿಂದ ಸ್ಥಳೀಯ ಮಟ್ಟದಲ್ಲಿ ವಿಪುಲ ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗ್ಯಾರಂಟಿಗಳ ಜತೆಗೆ ಅಭಿವೃದ್ಧಿ ಕಾರ್ಯಗಳೂ ನಿರಂತರ

ಗ್ಯಾರಂಟಿಗಳ ಜತೆಗೆ ಅಭಿವೃದ್ಧಿ ಕಾರ್ಯಗಳೂ ನಿರಂತರವಾಗಿ ಸಾಗುತ್ತಿದ್ದು, ನನೆಗುದಿಗೆ ಬಿದ್ದಿರುವ ‘ಉಳಗಾ-ಕೆರವಡಿ ಸೇತುವೆ’ ಕಾಮಗಾರಿಯನ್ನೂ ಶೀಘ್ರದಲ್ಲೇ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಮಹಾತ್ಮ ಗಾಂಧಿ ಭಾರತಕ್ಕಲ್ಲ ಪಾಕ್‌ಗೆ ರಾಷ್ಟ್ರಪಿತ: ಯತ್ನಾಳ್‌
ಉಚಿತ ಆರೋಗ್ಯ 10ನೇ ಗ್ಯಾರಂಟಿ ಯೋಜನೆ- ವಸತಿ 8, ಇ-ಖಾತಾ 9ನೇ ಗ್ಯಾರಂಟಿ ಸ್ಕೀಂ : ಡಿಕೆಶಿ