2027ರ ಸಪ್ತರಾಜ್ಯ ಚುನಾವಣೆಗೆ ಬಿಜೆಪಿ ಈಗಿಂದಲೇ ರಣತಂತ್ರ!

Published : Aug 24, 2026, 12:36 PM IST
BJP

ಸಾರಾಂಶ

ಮುಂದಿನ ವರ್ಷ ಉತ್ತರಪ್ರದೇಶ, ಗುಜರಾತ್ ಸೇರಿದಂತೆ 7 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳನ್ನು ಎದುರಿಸಲು ಬಿಜೆಪಿ ಭರ್ಜರಿ ತಂತ್ರಗಾರಿಕೆ ರೂಪಿಸುತ್ತಿದೆ.ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್‌ ಅಧ್ಯಕ್ಷತೆಯಲ್ಲಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಉನ್ನತ ಮಟ್ಟದ ಸಂಘಟನಾ ಸಭೆ ನಡೆಸಲಾಗಿದೆ

ನವದೆಹಲಿ : ಮುಂದಿನ ವರ್ಷ ಉತ್ತರ ಪ್ರದೇಶ, ಗುಜರಾತ್ ಸೇರಿದಂತೆ 7 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳನ್ನು ಎದುರಿಸಲು ಬಿಜೆಪಿ ಭರ್ಜರಿ ತಂತ್ರಗಾರಿಕೆ ರೂಪಿಸುತ್ತಿದೆ. ಇದರ ಭಾಗವಾಗಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್‌ ಅಧ್ಯಕ್ಷತೆಯಲ್ಲಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಉನ್ನತ ಮಟ್ಟದ ಸಂಘಟನಾ ಸಭೆ ನಡೆಸಲಾಗಿದೆ.

ಈ ಪ್ರಮುಖ ಸಭೆಯಲ್ಲಿ ನೂತನವಾಗಿ ಆಯ್ಕೆಗೊಂಡ ಪಕ್ಷದ ಪದಾಧಿಕಾರಿಗಳು, ವಿವಿಧ ರಾಜ್ಯ ಘಟಕಗಳ ಅಧ್ಯಕ್ಷರು ಹಾಗೂ ಸಂಘಟನಾ ಉಸ್ತುವಾರಿಗಳು ಭಾಗವಹಿಸಿದ್ದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಉಪಸ್ಥಿತರಿದ್ದರು. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವುದು ಹಾಗೂ ಯುವಜನತೆಯನ್ನು ಪಕ್ಷದತ್ತ ಸೆಳೆಯುವ ಕುರಿತು ವಿವರವಾದ ಚರ್ಚೆ ನಡೆಸಲಾಯಿತು.

7 ರಾಜ್ಯ ಚುನಾವಣೆ ಗುರಿ:

2027ರಲ್ಲಿ ಪಂಜಾಬ್‌, ಉತ್ತರ ಪ್ರದೇಶ, ಗುಜರಾತ್‌, ಉತ್ತರಾಖಂಡ, ಗೋವಾ, ಹಿಮಾಚಲ ಪ್ರದೇಶ ಹಾಗೂ ಮಣಿಪುರದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಈ ಪೈಕಿ ಪಂಜಾಬ್ ಮತ್ತು ಹಿಮಾಚಲ ಪ್ರದೇಶಗಳನ್ನು ಹೊರತುಪಡಿಸಿ ಉಳಿದ 5 ರಾಜ್ಯಗಳಲ್ಲಿ ಬಿಜೆಪಿ ಪ್ರಸ್ತುತ ಅಧಿಕಾರದಲ್ಲಿದೆ. ಮುಂದಿನ ಸಾಲಿನಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವುದು ಮತ್ತು ಚುನಾವಣಾ ತಂತ್ರಗಳನ್ನು ರೂಪಿಸುವುದೇ ಈ ಸಭೆಯ ಮುಖ್ಯ ಉದ್ದೇಶವಾಗಿತ್ತು ಎಂದು ಮೂಲಗಳು ತಿಳಿಸಿವೆ.

ಸತತ 2ನೇ ಸಭೆ:

ಇದಕ್ಕೂ ಮುನ್ನ ಶನಿವಾರ, ನಿತಿನ್‌ ನವೀನ್‌ ಪಕ್ಷದ ನೂತನ ಪದಾಧಿಕಾರಿಗಳ ಜತೆ ದಿನಪೂರ್ತಿ ಸಭೆ ನಡೆಸಿದ್ದರು. ಈ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಇವರನ್ನು ಭೇಟಿಯಾಗಿದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಸಿಎಂ ಡಿಕೆಶಿ, ಉದ್ಯಮಿ ಅದಾನಿ ಭೇಟಿ
2028ಕ್ಕೆ ಮತ್ತೆ ನನ್ನನ್ನು ಸಿಎಂ ಸ್ಥಾನಕ್ಕೆ ತನ್ನಿ- ಡಿಕೆ ಶಿವಕುಮಾರ್‌