ತಿರುವನಂತಪುರಂ: ಪ್ರಿಯಾಂಕಾ ಗಾಂಧಿ ಅವರಿಗೆ ಕೇರಳದ ವಯನಾಡ್ ಕ್ಷೇತ್ರವನ್ನು ಸೋದರ ರಾಹುಲ್ ಗಾಂಧಿ ಬಿಟ್ಟುಕೊಟ್ಟಿರುವ ಬಗ್ಗೆ ಬಿಜೆಪಿ ಕಿಡಿ ಕಾರಿದ್ದು, ಇದು ಕಾಂಗ್ರೆಸ್ ‘ರಾಜವಂಶದ ರಾಜಕೀಯ’ ಎಂದು ಟೀಕಿಸಿದೆ.
ರಾಜೀವ್ ಹೇಳಿಕೆಗೆ ಕಾಂಗ್ರೆಸ್ ನಾಯಕ ಪವನ್ ಖೇರಾ ಮೋದಿ ಹೆಸರು ಪ್ರಸ್ತಾಪಿಸಿ ತಿರುಗೇಟು ನೀಡಿದ್ದಾರೆ. ‘ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ವಾರಾಣಸಿಯಲ್ಲಿ ಸ್ಪರ್ಧಿಸುವ ಬಗ್ಗೆ ನಾಚಿಕೆಯಿಲ್ಲದೆ ವಡೋದರ ಜನತೆಯಿಂದ ಮುಚ್ಚಿಟ್ಟಿದ್ದರು’ ಎಂದು ವ್ಯಂಗ್ಯವಾಡಿದ್ದಾರೆ.
2014ರ ಲೋಕಸಭೆ ಚುನಾವಣೆಯಲ್ಲಿ ವಾರಣಾಸಿ ಮತ್ತು ವಡೋದರ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಮೋದಿ ಎರಡರಲ್ಲೂ ಗೆಲುವು ಕಂಡಿದ್ದರು. ಬಳಿಕ ವಾರಾಣಸಿಯನ್ನು ಆಯ್ಕೆ ಮಾಡಿಕೊಂಡು ಮೋದಿ ವಡೋದರಾ ಬಿಟ್ಟು ಕೊಟ್ಟಿದ್ದರು. ಇದೇ ವಿಚಾರ ಪ್ರಸ್ತಾಪಿಸಿ ಖೇರಾ ತಿರುಗೇಟು ನೀಡಿದ್ದಾರೆ.ಪ್ರಿಯಾಂಕಾ ವಿರುದ್ಧ ವಯನಾಡ್‌ನಲ್ಲಿ ಸ್ಪರ್ಧೆ: ಸಿಪಿಐ ಘೋಷಣೆ
ಪಕ್ಷದ ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ ಸುದ್ದಿಗಾರರೊಂದಿಗೆ ಮಾತನಾಡಿ, ‘ಎಲ್‌ಡಿಎಫ್ ಮೈತ್ರಿಕೂಟದಲ್ಲಿ ವಯನಾಡ್ ಕ್ಷೇತ್ರವನ್ನು ಸಿಪಿಐಗೆ ಬಿಟ್ಟುಕೊಡಲಾಗಿದೆ. ಹಾಗಾಗಿ ನಾವು ಖಂಡಿತ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ಸೆಣಸುತ್ತೇವೆ. ನಾವು ಯಾವುದೇ ಕಾರಣಕ್ಕೂ ಬಿಜೆಪಿಗೆ ಗೆಲುವಿನ ಅವಕಾಶ ಬಿಟ್ಟುಕೊಡುವುದಿಲ್ಲ’ ಎಂದು ತಿಳಿಸಿದರು.