ಲೋಕ ಅಭ್ಯರ್ಥಿ ಆಯ್ಕೆಗೆ ಬಿಜೆಪಿ, ಕಾಂಗ್ರೆಸ್‌ ಸರ್ಕಸ್‌

KannadaprabhaNewsNetwork |  
Published : Mar 12, 2024, 02:07 AM ISTUpdated : Mar 12, 2024, 07:54 AM IST
bjp emblem flag logo

ಸಾರಾಂಶ

ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವಾಗಲೇ, ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ಅಭ್ಯರ್ಥಿ ಆಯ್ಕೆಗೆ ಕಸರತ್ತು ತೀವ್ರಗೊಳಿಸಿದ್ದಾರೆ. ಈಗಾಗಲೇ 7 ಹೆಸರು ಘೋಷಿಸಿರುವ ಕಾಂಗ್ರೆಸ್‌ ಇದೀಗ 15 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವಾಗಲೇ, ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ಅಭ್ಯರ್ಥಿ ಆಯ್ಕೆಗೆ ಕಸರತ್ತು ತೀವ್ರಗೊಳಿಸಿದ್ದಾರೆ. ಈಗಾಗಲೇ 7 ಹೆಸರು ಘೋಷಿಸಿರುವ ಕಾಂಗ್ರೆಸ್‌ ಇದೀಗ 15 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ.

 ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬಿ.ಎಲ್‌. ಸಂತೋಷ್‌ ಅವರೂ ಇದ್ದರು. 

ಯಾವ ಕ್ಷೇತ್ರದಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.ಮತ್ತೊಂದೆಡೆ, ಈಗಾಗಲೇ 7 ಅಭ್ಯರ್ಥಿಗಳ ಹೆಸರು ಪ್ರಕಟಿಸಿರುವ ಕಾಂಗ್ರೆಸ್‌, ಉಳಿದ 21 ಅಭ್ಯರ್ಥಿಗಳ ಆಯ್ಕೆ ಸಲುವಾಗಿ ಸೋಮವಾರ ತಡರಾತ್ರಿವರೆಗೆ ಸ್ಕ್ರೀನಿಂಗ್‌ ಸಮಿತಿ ಸಭೆ ನಡೆಸಿತು. 

ಹದಿನೈದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ. ತೀವ್ರ ಪೈಪೋಟಿಯಿರುವ ಆರು ಕ್ಷೇತ್ರಗಳಿಗೆ ಹೆಸರು ಅಂತಿಮಗೊಳಿಸುವ ಬಗ್ಗೆ ತಡರಾತ್ರಿಯವರೆಗೂ ಚರ್ಚೆ ನಡೆದಿತ್ತು. 

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಮಿತಿ ಸದಸ್ಯರಾದ ಜಿಗ್ನೇಶ್ ಮೇವಾನಿ, ವಿಶ್ವಜಿತ್‌ ಕದಮ್‌ ಸೇರಿ ಹಲವರು ಭಾಗವಹಿಸಿದ್ದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ