;Resize=(412,232))
ಬೆಂಗಳೂರು : ಮುಂಬರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿ ಕಣಕ್ಕಿಳಿಸಲು ಎನ್‌ಡಿಎ ಮಿತ್ರಕೂಟದ ಬಿಜೆಪಿ ತೀರ್ಮಾನಿಸಿದೆ.
ಭಾನುವಾರ ನಡೆದ ಪಕ್ಷದ ಹಿರಿಯ ನಾಯಕರನ್ನೊಳಗೊಂಡ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಮಿತ್ರ ಪಕ್ಷ ಜೆಡಿಎಸ್ ವಿಶ್ವಾಸಕ್ಕೆ ಪಡೆದು ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಯಾವುದೇ ಕ್ಷಣದಲ್ಲಿ ಎದುರಾಗಬಹುದು. ಜೆಡಿಎಸ್ ಪಕ್ಷವನ್ನು ವಿಶ್ವಾಸಕ್ಕೆ ಪಡೆದು ನಮ್ಮ ಪಕ್ಷದ ಅಭ್ಯರ್ಥಿ ಕಣಕ್ಕಿಳಿಸಬೇಕು ಎಂಬ ತೀರ್ಮಾನವಾಗಿದೆ ಎಂದು ತಿಳಿಸಿದರು.