ಅಡ್ಡಮತ: ಎಸ್ಟಿಎಸ್‌, ಶಿವರಾಂ ಹೆಬ್ಬಾರ್‌ಗೆ ಬಿಜೆಪಿ ನೋಟಿಸ್‌

KannadaprabhaNewsNetwork |  
Published : Mar 03, 2024, 01:34 AM ISTUpdated : Mar 03, 2024, 07:58 AM IST
ಬಿಜೆಪಿ | Kannada Prabha

ಸಾರಾಂಶ

ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಶಾಸಕರಾದ ಎಸ್‌.ಟಿ.ಸೋಮಶೇಖರ್‌ ಮತ್ತು ಮತದಾನಕ್ಕೆ ಗೈರಾಗಿದ್ದ ಶಾಸಕ ಶಿವರಾಂ ಹೆಬ್ಬಾರ್‌ ಅವರಿಗೆ ಬಿಜೆಪಿ ನೋಟಿಸ್‌ ಜಾರಿ ಮಾಡಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಶಾಸಕರಾದ ಎಸ್‌.ಟಿ.ಸೋಮಶೇಖರ್‌ ಮತ್ತು ಮತದಾನಕ್ಕೆ ಗೈರಾಗಿದ್ದ ಶಾಸಕ ಶಿವರಾಂ ಹೆಬ್ಬಾರ್‌ ಅವರಿಗೆ ಬಿಜೆಪಿ ನೋಟಿಸ್‌ ಜಾರಿ ಮಾಡಿದೆ.

ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್‌ ಅವರು ಇಬ್ಬರಿಗೂ ಕಾರಣ ಕೇಳಿ ನೋಟಿಸ್‌ ನೀಡಿದ್ದಾರೆ. ಅದರಲ್ಲಿ, ಮಾ.5ರೊಳಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ.

ಫೆ.27ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಎಸ್‌.ಟಿ.ಸೋಮಶೇಖರ್‌ ಮತ್ತು ಶಿವರಾಂ ಹೆಬ್ಬಾರ್‌ ಅವರು ಪಕ್ಷದ ವಿಪ್‌ ಉಲ್ಲಂಘಿಸಿದ್ದಾರೆ. ಸೋಮಶೇಖರ್‌ ಪಕ್ಷದ ವಿಪ್‌ ಉಲ್ಲಂಘಿಸಿ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಚಲಾಯಿಸಿದ್ದರು.

ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್‌ ಮತದಾನದಿಂದ ದೂರ ಉಳಿದಿದ್ದರು. ಆದರೆ ಶಿವರಾಂ ಹೆಬ್ಬಾರ್ ಅನಾರೋಗ್ಯದ ಕಾರಣ ಮತದಾನಕ್ಕೆ ಗೈರು ಹಾಜರಾಗಿದ್ದೆ, ಯಾವುದೇ ದುರುದ್ದೇಶ ಇರಲಿಲ್ಲ ಎಂದು ತಿಳಿಸಿದ್ದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ