ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ-ಜೆಡಿಎಸ್‌ ಗಾಳ

KannadaprabhaNewsNetwork |  
Published : Feb 20, 2024, 01:55 AM ISTUpdated : Feb 20, 2024, 09:07 AM IST
ಬಿಜೆಪಿ ಜೆಡಿಎಸ್‌ | Kannada Prabha

ಸಾರಾಂಶ

ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ತಮ್ಮ ಎರಡನೇ ಅಭ್ಯರ್ಥಿಗೆ ಕೊರತೆಯಾಗುವ ಮತಗಳನ್ನು ಪಡೆಯಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಪ್ರಯತ್ನ ಆರಂಭಿಸಿದ್ದು, ಪಕ್ಷೇತರರು ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ಸಿನ ಕೆಲವು ಶಾಸಕರನ್ನು ಸದ್ದಿಲ್ಲದೆ ಸಂಪರ್ಕಿಸಿದೆ ಎನ್ನಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಇದೇ ತಿಂಗಳ 27ರಂದು ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ತಮ್ಮ ಎರಡನೇ ಅಭ್ಯರ್ಥಿಗೆ ಕೊರತೆಯಾಗುವ ಮತಗಳನ್ನು ಪಡೆಯಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಪ್ರಯತ್ನ ಆರಂಭಿಸಿದ್ದು, ಪಕ್ಷೇತರರು ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ಸಿನ ಕೆಲವು ಶಾಸಕರನ್ನು ಸದ್ದಿಲ್ಲದೆ ಸಂಪರ್ಕಿಸಿದೆ ಎನ್ನಲಾಗಿದೆ.

ಆದರೆ, ಇದುವರೆಗೆ ಯಾವುದೇ ಶಾಸಕರು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಎರಡನೇ ಅಭ್ಯರ್ಥಿ ಹಾಗೂ ಒಟ್ಟು ಅಭ್ಯರ್ಥಿಗಳ ಪೈಕಿ ಐದನೆಯವರಾಗಿರುವ ಕುಪೇಂದ್ರ ರೆಡ್ಡಿ ಅವರನ್ನು ಬೆಂಬಲಿಸುತ್ತೇವೆ ಎಂದು ಖಚಿತವಾಗಿ ಹೇಳಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಚುನಾವಣೆ ಒಟ್ಟು ನಾಲ್ಕು ಸ್ಥಾನಗಳಿಗೆ ನಡೆಯುತ್ತಿದ್ದು, ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ಸಿಗೆ ಮೂರು ಸ್ಥಾನ ಮತ್ತು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಮೊದಲ ಅಭ್ಯರ್ಥಿ ನಾರಾಯಣಸಾ ಭಾಂಡಗೆ ಅವರಿಗೆ ಒಂದು ಸ್ಥಾನ ಸುಲಭವಾಗಿ ಲಭಿಸಲಿದೆ. 

ಬಿಜೆಪಿಯ ಹೆಚ್ಚುವರಿ ಮತ್ತು ಜೆಡಿಎಸ್‌ನ ಎಲ್ಲ ಮತಗಳನ್ನು ಪಡೆದರೂ ಕುಪೇಂದ್ರ ರೆಡ್ಡಿ ಅವರಿಗೆ ಗೆಲ್ಲಲು ಇನ್ನೂ ಐದಾರು ಮತಗಳ ಕೊರತೆ ಎದುರಾಗುತ್ತದೆ. 

ಪಕ್ಷೇತರರ ಪೈಕಿ ಗಾಲಿ ಜನಾರ್ದನರೆಡ್ಡಿ ಅವರನ್ನು ಹೊರತುಪಡಿಸಿ ಇನ್ನುಳಿದ ಮೂವರು ಕಾಂಗ್ರೆಸ್ ಪರ ಒಲವು ಹೊಂದಿದ್ದಾರೆ. ಹೀಗಾಗಿ, ಹೆಚ್ಚುವರಿ ಮತಗಳನ್ನು ಪಡೆಯಬೇಕಾದಲ್ಲಿ ಕಾಂಗ್ರೆಸ್‌ನಿಂದಲೇ ಸೆಳೆಯಬೇಕಾಗುತ್ತದೆ.

ಈ ನಿಟ್ಟಿನಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಹಿರಿಯ ನಾಯಕರು ತೆರೆಮರೆಯಲ್ಲಿ ಕಾಂಗ್ರೆಸ್‌ನ ಕೆಲವರು ಶಾಸಕರನ್ನು ಸಂಪರ್ಕಿಸಿ ಸೆಳೆಯುವ ಪ್ರಯತ್ನ ನಡೆಸಿದ್ದಾರೆ. 

ಆದರೆ, ಅದು ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಈಗಲೇ ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಮತಚೋರಿ ಹೆಸರಲ್ಲಿ ಸುಳ್ಳು ಪ್ರಚಾರ ತಪ್ಪು: ದೇವೇಗೌಡ
ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು