ಮೊದಲಿನ ಕಾಂಗ್ರೆಸ್‌ಗೂ ಈಗಿನ ಕಾಂಗ್ರೆಸ್‌ಗೂ ಸಂಬಂಧವಿಲ್ಲ - ಕಾಂಗ್ರೆಸ್‌ ಬೆಳಗಾವಿ ಸಮಾವೇಶ ಬಗ್ಗೆ ಬಿಜೆಪಿ ಲೇವಡಿ

Published : Jan 21, 2025, 10:49 AM IST
Congress BJP

ಸಾರಾಂಶ

ಈಗಿರುವ ನಕಲಿ ಗಾಂಧಿಗಳು ಎಷ್ಟು ಡೋಂಗಿ ಗಾಂಧಿವಾದಿಗಳೋ ಅಧಿಕಾರಕ್ಕಾಗಿ ಅವರ ಗುಲಾಮಗಿರಿ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಅವರಿಗಿಂತ ಹೆಚ್ಚು ಡೋಂಗಿಗಳು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ.

ಬೆಂಗಳೂರು : ಈಗಿರುವ ನಕಲಿ ಗಾಂಧಿಗಳು ಎಷ್ಟು ಡೋಂಗಿ ಗಾಂಧಿವಾದಿಗಳೋ ಅಧಿಕಾರಕ್ಕಾಗಿ ಅವರ ಗುಲಾಮಗಿರಿ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಅವರಿಗಿಂತ ಹೆಚ್ಚು ಡೋಂಗಿಗಳು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ.

ಗಾಂಧಿ ಆದರ್ಶಗಳನ್ನು ಅನುಸರಿಸುವುದು ಎಂದರೆ ಪರಿಶಿಷ್ಟರ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಲೂಟಿ ಮಾಡುವುದಾ ಅಥವಾ ಸೂರಿಲ್ಲದ ಜನಸಾಮಾನ್ಯರು ಸೂರು ಕಟ್ಟಿಕೊಳ್ಳಲು ಸಿಗಬೇಕಾಗಿದ್ದ ಮೂಡಾ ಸೈಟುಗಳನ್ನು ಲಪಟಾಯಿಸುವುದಾ?

ಗಾಂಧಿ ತತ್ವಗಳನ್ನು ಅಳವಡಿಸಿಕೊಳ್ಳುವುದು ಎಂದರೆ ಗಾಂಧೀಜಿ ಅವರು ತಂದುಕೊಟ್ಟ ಸ್ವಾತಂತ್ರ್ಯ ಬಳಸಿಕೊಂಡು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವ ದೇಶದ್ರೋಹಿಗಳನ್ನು ಸಮರ್ಥನೆ ಮಾಡಿಕೊಳ್ಳುವುದಾ ಅಥವಾ ಗೋಮಾತೆಯ ಕೆಚ್ಚಲು ಕತ್ತರಿಸಿದರೂ ಮೌನ ವಹಿಸುವುದಾ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಗಾಂಧಿ ಕನಸನ್ನು ನನಸಾಗಿಸುವುದು ಎಂದರೆ ನಕಲಿ ಗಾಂಧಿಗಳ ಕೈಗೆ ಕಾಂಗ್ರೆಸ್ ಪಕ್ಷವನ್ನು ಕೊಟ್ಟು ಗುಮಲಾಗಿರಿ ಮಾಡುವುದಾ ಅಥವಾ ಸ್ವತಂತ್ರ ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿ ಇಡೀ ದೇಶವನ್ನೇ ಜೈಲು ಮಾಡುವುದಾ?

ಬಹುಶಃ ಇದನ್ನೆಲ್ಲ ಮುಂದಾಲೋಚನೆ ಮಾಡಿಯೇ ಗಾಂಧೀಜಿ ಅವರು ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಬೇಕು ಎಂದು ಹೇಳಿದ್ದರು ಅನ್ನಿಸುತ್ತೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಹೇಳಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!
ಉತ್ತರ ಕರ್ನಾಟಕಕ್ಕೆ ₹15,000 ಕೋಟಿ : ಅಜಯ್‌