ನವದೆಹಲಿ: ‘1991ರ ಲೋಕಸಭಾ ಚುನಾವಣೆಯಲ್ಲಿ ಜನತಾದಳದಲ್ಲಿದ್ದ ನನ್ನನ್ನು ಮೋಸದಿಂದ ಸೋಲಿಸಿದರು’ ಎಂದು ಕಾಂಗ್ರೆಸ್ ವಿರುದ್ಧ ಮತಗಳ್ಳತನದ ಆರೋಪ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಅದೇ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಗಿದ್ದಾರೆ ಹಾಗೂ ಬಿಹಾರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ವೋಟ್ ಅಧಿಕಾರ್ ರ್‍ಯಾಲಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ಮುಖಂಡ ಅಮಿತ್ ಮಾಳವೀಯ ವ್ಯಂಗ್ಯವಾಡಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನಾಧರಿಸಿ ‘ಕನ್ನಡಪ್ರಭ’ ಪತ್ರಿಕೆ ಪ್ರಕಟಿಸಿದ್ದ ವರದಿಯನ್ನು ಶುಕ್ರವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಳವೀಯ ಹಂಚಿಕೊಂಡಿದ್ದಾರೆ.
ಕನ್ನಡಪ್ರಭ ವರದಿ ಟ್ವೀಟ್ ಮಾಡಿದ ಕೇಂದ್ರ ಬಿಜೆಪಿ
1991ರ ಲೋಕಸಭೆ ಚುನಾವಣೆಯಲ್ಲಿ ಮೋಸದಿಂದ ಸೋಲಿಸಿದರು ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ‘ಕನ್ನಡಪ್ರಭ’ ರಾಷ್ಟ್ರೀಯ ಬಿಜೆಪಿ ಟ್ವೀಟ್ ಮಾಡಿ, ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ ಮಾಡಿದೆ.