ಕನ್ನಡಪ್ರಭ ವಾರ್ತೆ ಬೆಂಗಳೂರು
ಬುಧವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿಜಯೇಂದ್ರ, ಶ್ರೀನಗರದ ಲಾಲ್‍ಚೌಕದಲ್ಲಿ ಕಾರ್ಯಕರ್ತರು ಮುರಳಿ ಮನೋಹರ್ ಜೋಷಿಯವರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದೇವೆ. ರಾಜ್ಯ ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ. ಬಂಧಿತ ಶ್ರೀಕಾಂತ್ ಪೂಜಾರಿ ಬಿಡುಗಡೆವರೆಗೂ ಈ ಹೋರಾಟ ಮುಂದುವರೆಸಲಾಗುವುದು ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಮೊಘಲರ ಆಡಳಿತ, ತಾಲಿಬಾಲ್ ಆಡಳಿತ ಇದೆಯೇ ಎಂದು ಪ್ರತಿಯೊಬ್ಬರು ಮಾತನಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀರಾಮನ ಮಂದಿರ ನಿರ್ಮಾಣದ ಕನಸು ನನಸಾಗುತ್ತಿದೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶ್ರೀರಾಮನ ಮಂದಿರ ನಿರ್ಮಾಣ ನಿರ್ಮಾಣವಾಗಿ ಲೋಕಾರ್ಪಣೆ ಆಗಲಿದೆ. ಎಲ್ಲ ಕಡೆ ಉತ್ಸಾಹ, ಸಂತಸದ ವಾತಾವರಣ ಇದೆ. ರಾಜ್ಯ, ದೇಶದಲ್ಲಿ ಹಬ್ಬದ ವಾತಾವರಣವಿದೆ. ಇಂಥ ಸಂದರ್ಭದಲ್ಲಿ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ, ಪ್ರಭು ಶ್ರೀರಾಮಚಂದ್ರ ವಿರೋಧಿ ಸರ್ಕಾರವು ಮಂತ್ರಾಕ್ಷತೆ ಕೊಡುವುದನ್ನು ತಡೆಯುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.ಕೀಳುಮಟ್ಟದ ರಾಜಕಾರಣ:
ಕಾಂಗ್ರೆಸ್ ಪಕ್ಷದ ನೀತಿ ಕುಲಗೆಟ್ಟದ್ದು. ಹಿಜಾಬ್ ಪರ, ಶ್ರೀರಾಮನ ವಿರುದ್ಧ ನೀತಿಯಿಂದ ಜನತೆ ರಾಜ್ಯ ಸರ್ಕಾರದ ವಿರುದ್ಧ ಒಗ್ಗಟ್ಟಾಗಿದ್ದಾರೆ. ಹಿಂದುಗಳು ತೂಕಡಿಕೆ ಬಿಡಬೇಕು. ನಮ್ಮ ಸಂಸ್ಕೃತಿ, ಆಚಾರ, ವಿಚಾರಗಳನ್ನು ರಕ್ಷಿಸಲು ನಾವು ಕಟಿಬದ್ಧರಾಗಬೇಕು ಎಂದರು.
ಪಕ್ಷದ ಮುಖಂಡರಾದ ಎನ್.ರವಿಕುಮಾರ್, ಪಿ.ಸಿ.ಮೋಹನ್, ಪ್ರೀತಮ್ ಗೌಡ, ರವಿಸುಬ್ರಹ್ಮಣ್ಯ, ಛಲವಾದಿ ನಾರಾಯಣಸ್ವಾಮಿ, ನಂದೀಶ್ ರೆಡ್ಡಿ, ಪಿ.ರಾಜೀವ್, ಎನ್.ಆರ್.ರಮೇಶ್ ಮತ್ತಿತರರು ಪಾಲ್ಗೊಂಡಿದ್ದರು.