ಮುಡಾ ಹೋರಾಟ ದೆಹಲಿಗೆ ಒಯ್ಯಲು ಬಿಜೆಪಿ ಚಿಂತನೆ - ಸಂಸದರು, ಶಾಸಕರ ಜತೆಗೂಡಿ ಪ್ರತಿಭಟನೆ?

ಸಾರಾಂಶ

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ಸೇರಿದಂತೆ ವಿವಿಧ ರೀತಿಯ ಪ್ರತಿಭಟನೆ ನಡೆಸಿದ ಪ್ರಮುಖ ಪ್ರತಿಪಕ್ಷ ಬಿಜೆಪಿ, ತನ್ನ ಹೋರಾಟದ ಮುಂದಿನ ಭಾಗವಾಗಿ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ಬಗ್ಗೆ ಚಿಂತನೆ ನಡೆಸಿದೆ.

ಬೆಂಗಳೂರು :  ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ಸೇರಿದಂತೆ ವಿವಿಧ ರೀತಿಯ ಪ್ರತಿಭಟನೆ ನಡೆಸಿದ ಪ್ರಮುಖ ಪ್ರತಿಪಕ್ಷ ಬಿಜೆಪಿ, ತನ್ನ ಹೋರಾಟದ ಮುಂದಿನ ಭಾಗವಾಗಿ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ಬಗ್ಗೆ ಚಿಂತನೆ ನಡೆಸಿದೆ.

ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಬಗ್ಗೆ ಗುರುವಾರ ನ್ಯಾಯಾಲಯದಲ್ಲಿ ವಿಚಾರಣೆ ಬರಲಿದೆ. ಅಲ್ಲಿನ ಬೆಳವಣಿಗೆ ಆಧರಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಪ್ರತಿಭಟನೆ ಮಾಡುವುದಾದರೆ ಬರುವ ಸೆಪ್ಟೆಂಬರ್ ಮೊದಲ ವಾರದಲ್ಲಿ ದಿನ ನಿಗದಿಪಡಿಸುವ ನಿರೀಕ್ಷೆಯಿದೆ. ನ್ಯಾಯಾಲಯದಲ್ಲಿನ ಬೆಳವಣಿಗೆ ಕಾದು ನೋಡುತ್ತೇವೆ. ಬಳಿಕ ದೆಹಲಿಯಲ್ಲಿ ಪಕ್ಷದ ಸಂಸದರು, ಶಾಸಕರು ಹಾಗೂ ಮುಖಂಡರು ಪ್ರತಿಭಟನೆ ನಡೆಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದರು.

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಆ.3ರಿಂದ ಒಂದು ವಾರ ಕಾಲ ಬೆಂಗಳೂರಿನ ಕೆಂಗೇರಿಯಿಂದ ಮೈಸೂರುವರೆಗೆ ಜೆಡಿಎಸ್‌ ಜತೆಗೂಡಿ ಪಾದಯಾತ್ರೆ ನಡೆಸಿತ್ತು.

Share this article