ಮನಿ ಬಾಂಬ್‌ ಬಗ್ಗೆ ಸಿಎಂ, ಡಿಕೆಗೆ ಬಿಆರ್‌ಪಿ ವಿವರಣೆ

KannadaprabhaNewsNetwork |  
Published : Jun 26, 2025, 01:32 AM ISTUpdated : Jun 26, 2025, 05:32 AM IST
DK 4 | Kannada Prabha

ಸಾರಾಂಶ

ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿರುವ, ವಸತಿ ಹಂಚಿಕೆಯಲ್ಲಿ ಲಂಚಕ್ಕೆ ಸಂಬಂಧಿಸಿ ತಾವು ಮಾಡಿರುವ ಆರೋಪದ ಕುರಿತು ಹಿರಿಯ ಶಾಸಕ ಬಿ.ಆರ್‌. ಪಾಟೀಲ್‌ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ.

 ಬೆಂಗಳೂರು :  ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿರುವ, ವಸತಿ ಹಂಚಿಕೆಯಲ್ಲಿ ಲಂಚಕ್ಕೆ ಸಂಬಂಧಿಸಿ ತಾವು ಮಾಡಿರುವ ಆರೋಪದ ಕುರಿತು ಹಿರಿಯ ಶಾಸಕ ಬಿ.ಆರ್‌. ಪಾಟೀಲ್‌ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ.

ಆಳಂದ ಕ್ಷೇತ್ರದ ಗ್ರಾಪಂ ಮಟ್ಟದಲ್ಲಿ ವಸತಿ ಹಂಚಿಕೆಗೆ ತಾವು ನೀಡಿದ್ದ ಪಟ್ಟಿಗೆ ವಸತಿ ಇಲಾಖೆಯಿಂದ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಆದರೆ, ಕೆಲ ಗ್ರಾಪಂ ಅಧ್ಯಕ್ಷರು ನಾನು ನೀಡಿದ್ದ ಪಟ್ಟಿ ಜತೆಗೆ ಮನವಿ ಸಲ್ಲಿಸಿದ ನಂತರ ವಸತಿ ಇಲಾಖೆಯಿಂದ ಫಲಾನುಭವಿಗಳಿಗೆ ಮನೆಗಳು ಮಂಜೂರಾಗಿವೆ. ಅಲ್ಲದೆ, ಫಲಾನುಭವಿಗಳಿಗೆ ಮನೆ ಮಂಜೂರು ಮಾಡುವಲ್ಲಿ ಗ್ರಾಪಂ ಮಟ್ಟದಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ದಾಖಲೆಗಳಿವೆ ಎಂದು ತಿಳಿಸಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿದರು ಎಂದು ಮೂಲಗಳು ತಿಳಿಸಿವೆ.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಏನೇ ತಪ್ಪಾಗಿದ್ದರೂ ಪಕ್ಷದ ವೇದಿಕೆಯಲ್ಲಿ ಅಥವಾ ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಚರ್ಚೆ ಮಾಡಬೇಕಿತ್ತು. ಆಗಲೂ ಸರಿಯಾಗದಿದ್ದರೆ ನನ್ನ ಗಮನಕ್ಕೆ ತರಬೇಕಿತ್ತು. ಆದರೆ, ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ. ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ತಪ್ಪುಗಳಾಗಿದ್ದರೆ ನೇರವಾಗಿ ನನ್ನ ಗಮನಕ್ಕೇ ತನ್ನಿ ಎಂದು ಬಿ.ಆರ್‌. ಪಾಟೀಲ್‌ ಅವರಿಗೆ ತಿಳಿಸಿದರು ಎನ್ನಲಾಗಿದೆ.

ಬಿ.ಆರ್‌.ಪಾಟೀಲ್‌ ಭೇಟಿಗೂ ಮುನ್ನ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಸತಿ ಇಲಾಖೆ ಮೇಲಿನ ಆರೋಪಗಳ ಕುರಿತಂತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಜಮೀರ್‌ ಅಹಮದ್‌ ಖಾನ್‌, ಬಿ.ಆರ್‌.ಪಾಟೀಲ್‌ ಮಾಡಿರುವ ಆರೋಪವು ಗ್ರಾಪಂ ಮಟ್ಟಕ್ಕೆ ಸಂಬಂಧಿಸಿದ್ದು. ಇದರಲ್ಲಿ ನನ್ನ ಪಾತ್ರ ಏನೂ ಇಲ್ಲ. ಅಲ್ಲದೆ, ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದನ್ನು ನನ್ನ ಗಮನಕ್ಕೆ ಯಾರೂ ತಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಹಿರಂಗ ಹೇಳಿಕೆ ನೀಡದಂತೆ ರಾಜು ಕಾಗೆಗೆ ಸಿಎಂ ಸೂಚನೆ

ಸರ್ಕಾರ ಮತ್ತು ಸಚಿವರ ಕಾರ್ಯವೈಖರಿ ವಿರುದ್ಧ ಮಾಧ್ಯಮಗಳಲ್ಲಿ ಹೇಳಿಕೆ ನೀಡಿ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗುವಂತೆ ಮಾಡಿರುವ ಬಗ್ಗೆ ಶಾಸಕ ರಾಜು ಕಾಗೆ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬುಧವಾರ ಸಂಜೆ ತಮ್ಮನ್ನು ಭೇಟಿಯಾದ ರಾಜು ಕಾಗೆಯಿಂದ ವಿವರಣೆ ಪಡೆದ ಸಿದ್ದರಾಮಯ್ಯ, ಯಾವುದೇ ಸಮಸ್ಯೆಗಳಿದ್ದರೂ ನನ್ನ ಬಳಿ ಚರ್ಚಿಸಿ. ಕೆಲಸ ಮಾಡಿಕೊಡದ ಸಚಿವರಿಗೆ ತಿಳಿಹೇಳುತ್ತೇನೆ ಮತ್ತು ಸಮಸ್ಯೆ ಬಗೆಹರಿಸುತ್ತೇನೆ. ಆದರೆ, ಮಾಧ್ಯಮಗಳ ಎದುರು ಸರ್ಕಾರದ ಬಗ್ಗೆ ಮಾತನಾಡುವುದು ಸರಿಯಲ್ಲ. ಇನ್ನು ಮುಂದೆ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರವನ್ನುಂಟು ಮಾಡುವಂತಹ ಹೇಳಿಕೆ ನೀಡದಂತೆ ಸೂಚನೆ ನೀಡಿದರು.

ಸಮಸ್ಯೆ ಇದ್ದರೆ ನನಗೆ ಹೇಳಿ: ಕಾಗೆಗೆ ಸಿಎಂಈ ನಡುವೆ ಬುಧವಾರ ತಮ್ಮನ್ನು ಭೇಟಿಯಾದ ಶಾಸಕ ರಾಜು ಕಾಗೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ ಪಡೆದಿದ್ದಾರೆ. ಯಾವುದೇ ಸಮಸ್ಯೆಗಳಿದ್ದರೂ ನನ್ನ ಬಳಿ ಚರ್ಚಿಸಿ. ಕೆಲಸ ಮಾಡಿಕೊಡದ ಸಚಿವರಿಗೆ ತಿಳಿಹೇಳುತ್ತೇನೆ ಮತ್ತು ಸಮಸ್ಯೆ ಬಗೆಹರಿಸುತ್ತೇನೆ. ಆದರೆ, ಮಾಧ್ಯಮಗಳ ಎದುರು ಸರ್ಕಾರದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

17ಕ್ಕೆ ಮೊದಲ ವಂದೇಭಾರತ್‌ ಸ್ಲೀಪರ್‌ ರೈಲಿಗೆ ಚಾಲನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ