-ಟಿಎಪಿಸಿಎಂಎಸ್ ಗೋದಾಮಿನಿಂದ 1600 ಕ್ವಿಂಟಾಲ್ ಅಕ್ಕಿ ಕಳವು
ಅನ್ನಭಾಗ್ಯಕ್ಕೆಂದು ತಾಲೂಕಿಗೆ ವಿತರಿಸಲಾಗಿದ್ದ ಪಡಿತರ ಅಕ್ಕಿಯ ಪೈಕಿ ಸುಮಾರು 50 ಲಕ್ಷ ಮೌಲ್ಯದ 1600 ಕ್ವಿಂಟಲ್ ಅಕ್ಕಿ ಗೋದಾಮುನಿಂದಲೇ ಮಾಯವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಗೋದಾಮು ನಿರ್ವಹಣೆ ಮಾಡುತ್ತಿದ್ದ ನೌಕರರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ಅನ್ನಭಾಗ್ಯ ಯೋಜನೆಗೆಂದು ಪ್ರತಿ ತಿಂಗಳು ಪೂರೈಸುವ ಪಡಿತರ ಅಕ್ಕಿಯನ್ನು ಸಾತನೂರು ರಸ್ತೆಯಲ್ಲಿನ ಟಿಎಪಿಸಿಎಂಎಸ್ ಗೋದಾಮಿನಲ್ಲಿ ಸಂಗ್ರಹಿಸಿ ಅಲ್ಲಿಂದ ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸಲಾಗುತ್ತದೆ. ಡಿಸೆಂಬರ್ ಪಡಿತರ ಪೂರೈಕೆಗಾಗಿ ಬಂದಿದ್ದ ಅಕ್ಕಿಯಲ್ಲಿ ಸುಮಾರು 1600 ಕ್ವಿಂಟಲ್ ಅಕ್ಕಿಯನ್ನು ಗೋದಾಮಿನಿಂದ ಕಳವಾಗಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.ಏನಿದು ಪ್ರಕರಣ:
ನೌಕರ ಬಂಧನ: ಟಿಎಪಿಸಿಎಂಎಸ್ ಗೋದಾಮಿನಲ್ಲಿ ಪಡಿತರ ಅಕ್ಕಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದ ವ್ಯವಸ್ಥಾಪಕ ಚಂದ್ರಶೇಖರ್ ಎಂಬುವವನನ್ನು ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ.ಬಾಕ್ಸ್..............
ಚನ್ನಪಟ್ಟಣ: ಟಿಎಪಿಸಿಎಂಎಸ್ ಗೋದಾಮಿನಲ್ಲಿ 1600 ಕ್ವಿಂಟಲ್ ಅಕ್ಕಿ ನಾಪತ್ತೆಯಾಗಿರುವ ವಿಚಾರವನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ರಮ್ಯ ಸ್ಪಷ್ಟಪಡಿಸಿದ್ದಾರೆ.
ದೂರು ದಾಖಲು: ಗೋದಾಮುನಿಂದ ಅಪಾರ ಪ್ರಮಾಣದ ಅಕ್ಕಿ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ಟಿಎಪಿಸಿಎಂಎಸ್ ಕಾರ್ಯದರ್ಶಿ ಮತ್ತು ಸಿಬ್ಬಂದಿ ವಿರುದ್ಧ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಇಲಾಖಾ ಮಟ್ಟದಲ್ಲೂ ತನಿಖೆ ನಡೆಸಲಾಗುವುದು. ಚನ್ನಪಟ್ಟಣ ತಾಲೂಕು ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಟಿಎಪಿಸಿಎಂ ಗೋದಾಮನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ರಮ್ಯ, ತಹಸೀಲ್ದಾರ್ ಮಹೇಂದ್ರ ಪರಿಶೀಲಿಸಿದರು.