;Resize=(412,232))
ಮೈಸೂರು : ಬಿಹಾರ ಚುನಾವಣೆ ಬಳಿಕ ದೆಹಲಿಗೆ ತೆರಳಲಿದ್ದು, ಸಂಪುಟ ಪುನಾರಚನೆ ಕುರಿತು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚೆ ನಡೆಸುತ್ತೇನೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯಿಸಿ, ‘ಬಿಹಾರ ಚುನಾವಣೆ ಬಳಿಕ ನಾನು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರನ್ನು ಭೇಟಿ ಮಾಡುತ್ತೇನೆ. ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನ.15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಏನು ಹೇಳುತ್ತದೆಯೋ ಆ ರೀತಿ ನಡೆದುಕೊಳ್ಳುತ್ತೇನೆ’ ಎಂದು ಹೇಳಿದರು.
ಇದೇ ವೇಳೆ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮತದಾರರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಏನಾದ್ರು ಹೇಳಿದ್ಯಾ? ಯಾಕೆ ಪದೇ ಪದೇ ಅದನ್ನೇ ಮಾತನಾಡುತ್ತೀರಾ? ಜನ ಮಾತನಾಡುತ್ತಿಲ್ಲ. ಮಾಧ್ಯಮದವರೇ ಪದೇ ಪದೇ ಮಾತನಾಡುತ್ತಿದ್ದಾರೆ ಎಂದು ಗರಂ ಆದರು. ಕಾಂಗ್ರೆಸ್‌ಗೆ ಹೈಕಮಾಂಡ್ ಇದೆ. ಹೈಕಮಾಂಡ್ ಹೇಳುವುದು ಮಾತ್ರವೇ ಮುಖ್ಯ. ಅದೇ ಅಂತಿಮ ಎಂದು ಹೇಳಿದರು.
ಸದ್ಯ ನಾನು ದೆಹಲಿಗೆ ಹೋಗುವುದಿಲ್ಲ. ಬೆಳಗಾವಿಯಲ್ಲೇ ಇರುತ್ತೇನೆ. ಅವಶ್ಯಕತೆ ಬಂದಾಗ ದೆಹಲಿಗೆ ಹೋಗುತ್ತೇನೆ.
- ಸತೀಶ್ ಜಾರಕಿಹೊಳಿ, ಲೋಕೋಪಯೋಗಿ ಸಚಿವ