ಸಂಪುಟ ಖಾಲಿ ಸ್ಥಾನ ಭರ್ತಿ, ನಿಗಮ ಮಂಡಳಿ ನೇಮಕ ಬಗ್ಗೆ ಇಂದು ಚರ್ಚೆ

Published : Sep 16, 2026, 08:06 AM IST
dk shivakumar

ಸಾರಾಂಶ

ನಿಗಮ ಮಂಡಳಿ, ಸಂಪುಟ ಖಾಲಿ ಸ್ಥಾನ ಭರ್ತಿ ಹಾಗೂ ಪಕ್ಷ ಮತ್ತು ಸರ್ಕಾರದ ನಡುವಿನ ಸಮನ್ವಯತೆ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಬುಧವಾರ ರಾಜ್ಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಬೆಂಗಳೂರು : ನಿಗಮ ಮಂಡಳಿ, ಸಂಪುಟ ಖಾಲಿ ಸ್ಥಾನ ಭರ್ತಿ ಹಾಗೂ ಪಕ್ಷ ಮತ್ತು ಸರ್ಕಾರದ ನಡುವಿನ ಸಮನ್ವಯತೆ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಬುಧವಾರ ರಾಜ್ಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಕಾಂಗ್ರೆಸ್‌ ಸಮಿತಿಗಳ ಅಧ್ಯಕ್ಷರೊಂದಿಗೆ ಸಭೆ

ಬೆಳಗ್ಗೆ ನೂತನವಾಗಿ ಆಯ್ಕೆಯಾಗಿರುವ ಜಿಲ್ಲಾ ಕಾಂಗ್ರೆಸ್‌ ಸಮಿತಿಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಲಿದ್ದಾರೆ. ಈ ವೇಳೆ ಮುಖ್ಯವಾಗಿ ಎಸ್‌ಐಆರ್‌ ಹಾಗೂ ಮುಂದಿನ ಚುನಾವಣಾ ಸಿದ್ಧತೆ ಬಗ್ಗೆ ಮಹತ್ವದ ಸೂಚನೆಗಳನ್ನು ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ವೇಣುಗೋಪಾಲ್‌ ಹಾಗೂ ಸುರ್ಜೇವಾಲ ಅವರು ಸಭೆ

ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಅವರೊಂದಿಗೆ ವೇಣುಗೋಪಾಲ್‌ ಹಾಗೂ ಸುರ್ಜೇವಾಲ ಅವರು ಸಭೆ ನಡೆಸಲಿದ್ದಾರೆ.

ಈ ವೇಳೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಭರ್ತಿ ವೇಳೆ ಯಾವ ಶಾಸಕರು ಹಾಗೂ ನಾಯಕರಿಗೆ ಅವಕಾಶ ನೀಡಬೇಕು. ಶಿವಕುಮಾರ್‌ ಅವರ ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನ ಭರ್ತಿ ಬಗ್ಗೆ ಯಾವ ನಡೆ ಅನುಸರಿಸಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ. ಜತೆಗೆ 2028ರ ಚುನಾವಣೆಗೆ ಈಗಲೇ ತಯಾರಿ ಶುರು ಮಾಡಬೇಕು. ಇದಕ್ಕಾಗಿ ಯಾವ ರೀತಿಯ ಕಾರ್ಯಕ್ರಮಗಳನ್ನು ರೂಪಿಸಬೇಕು. ಪಕ್ಷ ಹಾಗೂ ಸರ್ಕಾರದ ನಡುವೆ ಯಾವ ರೀತಿ ಸಮನ್ವಯತೆ ಸಾಧಿಸಬೇಕು ಎಂಬ ಬಗ್ಗೆಯೂ ಚರ್ಚಿಸುವ ಸಾಧ್ಯತೆಯಿದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಬಿಜೆಪಿ, ದಳದ ಹಲವು ನಾಯಕರು ನನ್ನ ಸಂಪರ್ಕದಲ್ಲಿ: ಡಿಕೆ ಬಾಂಬ್‌
2029ರ ವೇಳೆಗೆ 21 ಎನ್‌ಡಿಎ ರಾಜ್ಯದಲ್ಲಿ ಯುಸಿಸಿ: ಅಮಿತ್‌