ಕಲಬುರಗಿ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನನ್ನನ್ನು ರಾಜಕೀಯವಾಗಿ ಮುಗಿಸುತ್ತೇನೆ ಎಂದು ಅಂದುಕೊಂಡಿದ್ದರೆ ಅದು ಅವರ ಮೂರ್ಖತನ. ನನ್ನನ್ನು ಅಷ್ಟು ಸುಲಭ ಅಂದುಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಕಲಬುರಗಿ ತಾಲೂಕಿನ ಕವಲಗಿ (ಕೆ) ಗ್ರಾಮದಲ್ಲಿ ಸೋಮವಾರ ಸಂಗೊಳ್ಳಿ ರಾಯಣ್ಣ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆಂದೂ ಸಣ್ಣ ತಪ್ಪು ಮಾಡದವ ಇಂದು ತಪ್ಪು ಮಾಡಲು ಸಾಧ್ಯವೇ? ನಾನು ಹಿಂದೆಯೂ ತಪ್ಪು ಮಾಡಿಲ್ಲ, ಮುಂದೆಯೂ ಮಾಡಲ್ಲ ಎಂದು ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು.