ಕಾವೇರಿ: ಆಲ್ಕಿಯಲ್ಲಿ ನೀರು ಹಾಕಿ ವಿನೂತನ ಪ್ರತಿಭಟನೆ

KannadaprabhaNewsNetwork |  
Published : Nov 14, 2023, 01:15 AM IST
 ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ  64 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಸೋಮವಾರ  ಆಲ್ಕಿಯಲ್ಲಿ ನೀರು ಹಾಕಿ  ವಿನೂತನ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 64 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದ್ದು ಸೋಮವಾರ ಆಲ್ಕಿಯಲ್ಲಿ ನೀರು ಹಾಕಿ ವಿನೂತನ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ಸೇನಾ ಪಡೆಯ ಹೋರಾಟ ನಿರಂತರ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 64 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದ್ದು ಸೋಮವಾರ ಆಲ್ಕಿಯಲ್ಲಿ ನೀರು ಹಾಕಿ ವಿನೂತನ ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಲ್ಕಿ ನೀರು ಹಾಕಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 64 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ಸರ್ಕಾರಗಳು, ಕಾವೇರಿ ನಿರ್ವಹಣಾ ಮಂಡಳಿ ತಮಿಳುನಾಡಿಗೆ ನಿರಂತರ ನೀರು ಬಿಡುವ ಮೂಲಕ ಜಲಾಶಯಗಳನ್ನು ಬರಿದಾಗಿ ಮಾಡಿವೆ. ಇನ್ನೂ ಮುಂದೆ ಆಲ್ಕಿಯಲ್ಲಿ ತಮಿಳುನಾಡಿಗೆ ನೀರು ಬಿಡಬೇಕಾಗುತ್ತದೆ ಎಂದು ಆರೋಪಿಸಿ ನಾವೆಲ್ಲರೂ ಆಲ್ಕಿಯಲ್ಲಿ ನೀರು ಹಾಕುವ ಮೂಲಕ ವಿನೂತನ ಅಣಕು ಪ್ರತಿಭಟನೆ ನಡೆಸಿದ್ದೇವೆ ಎಂದರು.

ಮಳೆ ಕೊರತೆಯಿಂದ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರು ಬತ್ತಿಹೋಗಿದೆ. ಇದನ್ನು ಕಾವೇರಿ ನೀರು ನಿರ್ವಹಣಾ ಸಮಿತಿ ಅರ್ಥ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ದರು. ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ಗು.ಪುರುಷೋತ್ತಮ್, ಮಂಜು, ಪ್ರಕಾಶ್, ತಾಂಡವಮೂರ್ತಿ, ವೀರಭದ್ರ, ಚಾ.ಸಿ.ಸಿದ್ದರಾಜು, ಸಿದ್ದಶೆಟ್ಟಿ, ರಾಚಪ್ಪ, ಇತರರು ಭಾಗವಹಿಸಿದ್ದರು.

-------------

13ಸಿಎಚ್‌ಎನ್11

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಸೋಮವಾರ ಆಲ್ಕಿಯಲ್ಲಿ ನೀರು ಹಾಕಿ ವಿನೂತನ ಪ್ರತಿಭಟನೆ ನಡೆಸಲಾಯಿತು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಮಹಿಳಾ ಮಂಡಲ ಮುತ್ತಿಗೆಯಿಂದ ಪ್ರಧಾನಿ ಮೋದಿ ಮಾತಿಗೆ ಬ್ರೇಕ್‌
ರಾಹುಲ್‌, ಸಚಿವ ಬಿಟ್ಟು ನಡುವೆ ದ್ರೋಹಿ, ದೇಶದ್ರೋಹಿ ಸಮರ - ಮಾಜಿ ಸ್ನೇಹಿತರ ವಾಕ್ಸಮರ