;Resize=(412,232))
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯಲ್ಲಿ ಗೊಂದಲಗಳ ಬಗ್ಗೆ ದೂರು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ತಂಡವು ಸೋಮವಾರ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡುತ್ತಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರಿಂದ ಮಾಹಿತಿ ಸಂಗ್ರಹಿಸಲಿದೆ. ಅಂತೆಯೇ ರಾಜ್ಯದ ವಿವಿಧೆಡೆ ಸಂಚರಿಸಿ ಎಸ್‌ಐಆರ್ ಪ್ರಕ್ರಿಯೆಯನ್ನು ಖುದ್ದು ವೀಕ್ಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ವಿವಿಧ ರಾಜಕೀಯ ಪಕ್ಷಗಳಿಂದ ಕೇಳಿ ಬಂದಿರುವ ಆರೋಪಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಿದೆ. ಅಂತೆಯೆ ಸಲ್ಲಿಕೆಯಾಗಿರುವ ದೂರುಗಳ ಬಗ್ಗೆಯೂ ಕೇಂದ್ರ ಅಧಿಕಾರಿಗಳ ಈ ತಂಡವು ಸಮಾಲೋಚನೆ ನಡೆಸಲಿದೆ ಎಂದು ತಿಳಿದು ಬಂದಿದೆ.