ಚನ್ನಪಟ್ಟಣ ಅಭ್ಯರ್ಥಿ ಅಂತಿಮವಾಗಿಲ್ಲ: ಕುಮಾರಸ್ವಾಮಿ

KannadaprabhaNewsNetwork |  
Published : Jul 07, 2024, 01:27 AM ISTUpdated : Jul 07, 2024, 04:38 AM IST
ಎಚ್‌.ಡಿ.ಕುಮಾರಸ್ವಾಮಿ | Kannada Prabha

ಸಾರಾಂಶ

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಅಭ್ಯರ್ಥಿ ಕುರಿತು ಈವರೆಗೆ ಯಾವುದೇ ರೀತಿಯಲ್ಲೂ ಚರ್ಚೆಯಾಗಿಲ್ಲ. ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರ ಜತೆ ಚಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

 ಬೆಂಗಳೂರು :  ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಅಭ್ಯರ್ಥಿ ಕುರಿತು ಈವರೆಗೆ ಯಾವುದೇ ರೀತಿಯಲ್ಲೂ ಚರ್ಚೆಯಾಗಿಲ್ಲ. ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರ ಜತೆ ಚಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. 

ಚನ್ನಪಟ್ಟಣದಲ್ಲಿ ತಮ್ಮ ಸ್ಪರ್ಧೆಗೆ ಜೆಡಿಎಸ್‌ ಕೂಡ ಸಮ್ಮತಿಸಿದೆ ಎಂಬ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್‌ ಹೇಳಿಕೆ ಬೆನ್ನಲ್ಲೇ, ಇಂಥ ಹೇಳಿಕೆಯನ್ನು ನೀಡುವ ಮೂಲಕ ಕುಮಾರಸ್ವಾಮಿ ಅವರು ಯೋಗೇಶ್ವರ್‌ ಹೇಳಿಕೆಯನ್ನು ಸ್ಪಷ್ಟವಾಗಿ ಅಲ್ಲಗಳೆದಿದ್ದಾರೆ.ಶನಿವಾರ ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ವಿಚಾರವಾಗಿ ಮಿತ್ರ ಪಕ್ಷಗಳ ನಡುವೆ ಚರ್ಚೆಯಾಗಿಲ್ಲ. ಬಿಜೆಪಿ ಹೈಕಮಾಂಡ್‌ ಜತೆಗೂ ಯಾವುದೇ ಮಾತುಕತೆ ನಡೆದಿಲ್ಲ. ಅಭ್ಯರ್ಥಿ ಘೋಷಣೆಗೆ ಇನ್ನೂ ಸಮಯಾವಕಾಶ ಇದೆ. ಉಪಚುನಾವಣೆ ಘೋಷಣೆ ಬಳಿಕ ಅಭ್ಯರ್ಥಿಯ ಆಯ್ಕೆಯನ್ನು ಅಂತಿಮಗೊಳಿಸಲಾಗುವುದು ಎಂದರು.

ಮಾಧ್ಯಮಗಳು ತಮಗೆ ಇಷ್ಟಬಂದವರ ಹೆಸರನ್ನು ಹರಿಬಿಡುತ್ತಿವೆ. ಈ ಮೊದಲು ನಿಖಿಲ್‌ ಕುಮಾರಸ್ವಾಮಿ ಅಭ್ಯರ್ಥಿ ಎಂದು ವರದಿ ಬಿತ್ತರಿಸಿದವು. ಈಗ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಪತ್ನಿ ಅನಸೂಯ ಹೆಸರನ್ನು ಹರಿಬಿಟ್ಟಿವೆ. ಈ ಬಗ್ಗೆ ಮಾಧ್ಯಮಗಳೇ ತೀರ್ಮಾನಿಸುತ್ತಿವೆ. ಆದರೆ, ವಾಸ್ತವವಾಗಿ ಬಿಜೆಪಿ-ಜೆಡಿಎಸ್‌ನಲ್ಲಿ ಈ ಬಗ್ಗೆ ಚರ್ಚೆಯೇ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ