ಸತೀಶ್ ಜಾರಕಿಹೊಳಿ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, 35 ಶಾಸಕರ ಡಿನ್ನರ್ ಮೀಟಿಂಗ್

Published : Jan 03, 2025, 06:25 AM IST
satish jarkiholi

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಸೇರಿ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಸೇರಿ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ. ಸಭೆಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಭಾಗಿಯಾಗಿರುವುದು ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಎನ್. ರಾಜಣ್ಣ, ಡಾ.ಎಚ್.ಸಿ. ಮಹದೇವಪ್ಪ ಸೇರಿ ಏಳು ಮಂದಿ ಸಚಿವರು ಹಾಜರಿದ್ದರು. ಜತೆಗೆ ಒಟ್ಟು 35 ಮಂದಿ ಶಾಸಕರೂ ಭಾಗವಹಿಸಿದ್ದರು. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಭೋಜನಕೂಟಕ್ಕೆ ಆಹ್ವಾನಿಸಿದ್ದಾಗಿ ಸತೀಶ್ ಜಾರಕಿಹೊಳಿ ಕಚೇರಿ ಮೂಲಗಳು ಸ್ಪಷ್ಟಪಡಿವೆ. ಆದರೂ ಡಿ.ಕೆ. ಶಿವಕುಮಾ‌ರ್ ವಿದೇಶ ಪ್ರವಾಸದಲ್ಲಿದ್ದಾಗ ನಡೆಯುತ್ತಿ ರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಔತಣಕೂಟ ಮಹತ್ವ ಪಡೆದುಕೊಂಡಿದೆ.

* ಹೊಸ ವರ್ಷಾಚರಣೆಗೆ ವಿದೇಶ ಪ್ರವಾಸಕ್ಕೆ ತೆರಳಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

* ಇದರ ನಡುವೆಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಹೇಳಿಕೆ ನೀಡಿದ್ದ ಸಚಿವ ಸತೀಶ್‌ ಜಾರಕಿಹೊಳಿ

* ಬೆನ್ನಲ್ಲೇ ಅವರ ನಿವಾಸದಲ್ಲಿ ಸಿಎಂ, 7 ಸಚಿವರು, 35 ಶಾಸಕರಿಂದ ಔತಣ ಸಭೆ

* ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಭೋಜನಕೂಟ ಎಂದು ಸ್ಪಷ್ಟನೆ

* ಡಿಕೆಶಿ ಅನುಪಸ್ಥಿತಿಯಲ್ಲಿ ನಡೆದ ಔತಣ ಕೂಟ ಸಭೆ ಕುರಿತು ಭಾರಿ ಕುತೂಹಲ

PREV

Recommended Stories

ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ