ಡಿಸೆಂಬರ್ ಒಳಗೆ ಮುಖ್ಯಮಂತ್ರಿ ಕುರ್ಚಿ ಖಾಲಿ : ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ

Published : Apr 09, 2025, 11:52 AM IST
Karnataka Chief Minister Siddaramaiah (File Photo/ANI)

ಸಾರಾಂಶ

ಇದೇ ಡಿಸೆಂಬರ್ ಒಳಗಾಗಿ ಮುಖ್ಯಮಂತ್ರಿ ಕುರ್ಚಿ ಖಾಲಿಯಾಗದಿದ್ದರೆ ನನ್ನ ಬಂದು ಕೇಳಿ ಎಂದು ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ಮುಖ್ಯಮಂತ್ರಿ ಬದಲಾವಣೆಯ ತಮ್ಮ ಹೇಳಿಕೆ ಪುನಾ ಸಮರ್ಥಿಸಿಕೊಂಡಿದ್ದಾರೆ.

 ದಾವಣಗೆರೆ : ಇದೇ ಡಿಸೆಂಬರ್ ಒಳಗಾಗಿ ಮುಖ್ಯಮಂತ್ರಿ ಕುರ್ಚಿ ಖಾಲಿಯಾಗದಿದ್ದರೆ ನನ್ನ ಬಂದು ಕೇಳಿ ಎಂದು ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ಮುಖ್ಯಮಂತ್ರಿ ಬದಲಾವಣೆಯ ತಮ್ಮ ಹೇಳಿಕೆ ಪುನಾ ಸಮರ್ಥಿಸಿಕೊಂಡಿದ್ದಾರೆ.

ಚನ್ನಗಿರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯಕ್ಕಂತೂ ನಾನು ಏನನ್ನೂ ಮಾತನಾಡುವುದಿಲ್ಲ. ಕೆಸಿಸಿಸಿ ಅಧ್ಯಕ್ಷ ಹುದ್ದೆಯೂ ಸದ್ಯಕ್ಕೆ ಖಾಲಿ ಇಲ್ಲವಲ್ಲ. ಆ ಕುರ್ಚಿ ಖಾಲಿಯಾದ ನಂತರ ಯಾರಿಗೆ ಅರ್ಹತೆ ಇರುತ್ತದೋ ಅಂತಹವರು ಅಧ್ಯಕ್ಷರಾಗುತ್ತಾರೆ. ನಮ್ಮ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಹ ಆಗಬಹುದು ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ ಜಾರಕಿಹೊಳಿ ಹೆಸರು ಕೇಳಿಬರುತ್ತಿರುವ ಬಗ್ಗೆ ಶಿವಗಂಗಾ ಪ್ರತಿಕ್ರಿಯಿಸಿದರು.

ವಿಪಕ್ಷ ಬಿಜೆಪಿ ಆವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ಮೊದಲು ಆ ಹೆಗ್ಗಣವನ್ನು ನೋಡಿಕೊಳ್ಳಲಿ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಜಿಎಸ್‌ಟಿ ಪಾಲನ್ನೇ ಕೊಡುತ್ತಿಲ್ಲ. ಅಂತಹ ಪಕ್ಷದವರು ನಮ್ಮ ಸರ್ಕಾರದ ವಿರುದ್ಧ ಜನಾಕ್ರೋಶ ರ್‍ಯಾಲಿ ಮಾಡುತ್ತಿದ್ದಾರೆ. ಮೊದಲು ಕೇಂದ್ರದ ವಿರುದ್ಧ ಹೋರಾಟ ಮಾಡಲಿ ಎಂದು ಸಲಹೆ ನೀಡಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಮತಚೋರಿ ಹೆಸರಲ್ಲಿ ಸುಳ್ಳು ಪ್ರಚಾರ ತಪ್ಪು: ದೇವೇಗೌಡ
ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು