ಯಾರೋ ಹೇಳಿದ ಮಾತ್ರಕ್ಕೆ ಬದಲಾವಣೆ ಸಾಧ್ಯವಿಲ್ಲ: ಶಾಸಕ ಕೆ.ಎಂ.ಉದಯ್ ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಯ್ಕೆಗೆ ತನ್ನದೇ ಆದ ಮಾನದಂಡವಿರುತ್ತದೆ. ಅದಕ್ಕೆ ಅನುಗುಣವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.
ಯಾರೋ ಹೇಳಿಕೆ ನೀಡಿದರೆಂಬ ಕಾರಣಕ್ಕೆ ಮುಖ್ಯಮಂತ್ರಿಯಾಗುವುದಿಲ್ಲ. ದಲಿತರು ಮುಖ್ಯಮಂತ್ರಿಯಾಗಲು ಈ ಹಿಂದೆ ಅವಕಾಶವಿತ್ತು. ಮುಖ್ಯಮಂತ್ರಿ ಮಾಡುವುದು ಬಿಡುವುದು ಹೈಕಮಾಂಡ್ ತೀರ್ಮಾನ ಎಂದು ಹೇಳುವ ಮೂಲಕ ದಲಿತ ಸಿಎಂ ವಿಚಾರವನ್ನು ತಳ್ಳಿ ಹಾಕಿದರು.ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಲು ಎಲ್ಲ ಅರ್ಹತೆ ಇದೆ. ಮುಂದಿನ ದಿನಗಳಲ್ಲಿ ಅವರೇ ಮುಖ್ಯಮಂತ್ರಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಕೆಪಿಸಿಸಿ ಅಧ್ಯಕ್ಷರಾದ ನಂತರ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ವಿಶ್ರಾಂತಿ ಇಲ್ಲದೆ ಸಾಕಷ್ಟು ಶ್ರಮಿಸಿದ್ದಾರೆ. ಹೀಗಾಗಿ ಅವರಿಗೆ ಅವಕಾಶ ಸಿಗಬೇಕು ಎನ್ನುವುದು ನನ್ನ ಬಯಕೆ ಎಂದರು.
ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಘಟನೆಗೆ ದುಡಿದು 138 ಸ್ಥಾನಗಳನ್ನು ಪಡೆದುಕೊಳ್ಳಲು ಯಶಸ್ವಿಯಾಗಿದ್ದಾರೆ. ಅವರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದಾಗಿನಿಂದಲೂ ಸೋಲಿಲ್ಲದ ಸರದಾರ ಎಂದು ಖ್ಯಾತರಾಗಿದ್ದಾರೆ. ಅವರೇ ಮುಖ್ಯಮಂತ್ರಿಯಾದರೆ ರಾಜ್ಯದಲ್ಲಿ ಕಾಂಗ್ರೆಸ್ ಗಟ್ಟಿಯಾಗಿ ಬೇರೂರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಇಂತಿಯಾಜ್, ಹೊಂಬಯ್ಯ ಮತ್ತಿತರರಿದ್ದರು.4ಕೆಎಂಎನ್ ಡಿ17
ಮದ್ದೂರು ಪುರಸಭೆ ವ್ಯಾಪ್ತಿ ಜನಸಂಪರ್ಕ ಸಭೆಗೆ ಆಗಮಿಸಿದ್ದ ಶಾಸಕ ಕೆ.ಎಂ.ಉದಯ್ ಅವರನ್ನು ಅಭಿನಂದಿಸಲಾಯಿತು.