;Resize=(412,232))
ಸುವರ್ಣ ವಿಧಾನಸೌಧ: ಮುಖ್ಯಮಂತ್ರಿ ಸ್ಥಾನದ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ವಿಧಾನಪರಿಷತ್ ಸದಸ್ಯ ಯತೀಂದ್ರ ಅವರಿಗೆ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಸಿಎಂ ಸಿದ್ದರಾಮಯ್ಯ ಅವರು ನಿರ್ದೇಶಿಸಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ, ಈ ವಿಚಾರವನ್ನು ಮುಖ್ಯಮಂತ್ರಿ ಅವರ ಕಾರ್ಯಾಲಯ ನಿರಾಕರಿಸಿದೆ.
ಪೂರ್ಣಾವಧಿಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಯತೀಂದ್ರ ಸೋಮವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಅದರಿಂದಾಗಿ ತಣ್ಣಗಾಗಿದ್ದ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಬುಗಿಲೇಳುವಂತೆ ಮಾಡಿತ್ತು.
ಹೀಗಾಗಿ ಮಂಗಳವಾರ ಸಿದ್ದರಾಮಯ್ಯ ಅವರು ಯತೀಂದ್ರರನ್ನು ತಮ್ಮ ಕಚೇರಿಗೆ ಕರೆಸಿ ನಾಯಕತ್ವ ಬದಲಾವಣೆ ವಿಚಾರವಾಗಿ ಯಾವುದೇ ಹೇಳಿಕೆ ನೀಡದಂತೆ ಸೂಚಿಸಿದ್ದಾರೆ ಹಾಗೂ ಈ ವಿಚಾರವಾಗಿ ಯತೀಂದ್ರ ಅವರನ್ನು ಗದರಿದ್ದಾರೆ ಎಂಬ ವಿಚಾರ ಹರಡಿತ್ತ