;Resize=(412,232))
ಬೆಂಗಳೂರು : ದೇಶದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾದ ಅದಾನಿ ಗ್ರೂಪ್‌ನ ಸ್ಥಾಪಕ ಮತ್ತು ಅಧ್ಯಕ್ಷ ಗೌತಮ್ ಅದಾನಿ ಅವರು ಭಾನುವಾರ ನಗರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಆರ್ಟ್ ಆಫ್ ಲಿವಿಂಗ್ಗೆ ಆಗಮಿಸಿದ್ದ ಗೌತಮ್ ಅದಾನಿ ಅವರು ಬಳಿಕ ಸದಾಶಿವನಗರದ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸುಮಾರು 20 ನಿಮಿಷಗಳ ಕಾಲ ಚರ್ಚಿಸಿದರು.
ಈ ವೇಳೆ ಅವರು, ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಬೆಂಗಳೂರು ಸುರಂಗ ರಸ್ತೆ ಯೋಜನೆ ಕುರಿತು ಹಾಗೂ ತಮ್ಮ ಮತ್ತಷ್ಟು ಉದ್ದಿಮೆಗಳ ಸ್ಥಾಪನೆ ಸಂಬಂಧ ಚರ್ಚೆ ನಡೆಸಿದರು ಎಂದು ಹೇಳಲಾಗಿದ್ದು, ಅವರ ಈ ಭೇಟಿ ರಾಜಕೀಯವಾಗಿ ಕುತೂಹಲ ಕೆರಳಿಸಿದೆ.
ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಉದ್ದೇಶಿತ 17 ಕಿ.ಮೀ. ಉದ್ದದ ಬೆಂಗಳೂರು ಸುರಂಗ ರಸ್ತೆ ಯೋಜನೆಗೆ ರಾಜ್ಯ ಸರ್ಕಾರ ಎನ್‌ಒನ್ ಬಿಡ್ಡಿಂಗ್ ಪ್ರಕ್ರಿಯೆ ಕೈಗೊಂಡಿದೆ. ರಾಜ್ಯ ಸರ್ಕಾರ ಎಸ್ಟೀಂ ಮಾಲ್‌ನಿಂದ ಸಿಲ್ಕ್‌ಬೋರ್ಡ್‌ವರೆಗೆ ಆರುಪಥ ಸುರಂಗ ರಸ್ತೆ ನಿರ್ಮಿಸುವ ಗುರಿಯ ಈ ಯೋಜನೆಗೆ 17,700 ಕೋಟಿ ರು. ಮೊತ್ತ ನಿಗದಿಪಡಿಸಿದೆ.
ಮಾಹಿತಿ ಪ್ರಕಾರ, ಯೋಜನೆಗೆ ಬಿಟ್ಟಿಂಗ್ ಮಾಡಿರುವ ಕಂಪನಿಗಳ ಪೈಕಿ ಅದಾನಿ ಗ್ರೂಪ್‌ನ ಕಂಪನಿಯು 22,262 ಕೋಟಿ ರು.ಗಳಿಗೆ ಬಿಡ್ ಸಲ್ಲಿಸಿದೆ. ಉಳಿದ 3 ಕಂಪನಿಗಳು ಇನ್ನೂ ಹೆಚ್ಚಿನ ಮೊತ್ತದ ಬಿಡ್ ಸಲ್ಲಿಸಿದೆ. ಇತರೆ ಕಂಪನಿಗಳಿಗೆ ಹೋಲಿಸಿದರೆ ಅದಾನಿ ಗ್ರೂಪ್‌ನ ಕಂಪನಿ ಕಡಿಮೆ ಮೊತ್ತದ ಬಿಡ್ ಮಾಡಿರುವುದರಿಂದ ಆ ಸಂಸ್ಥೆಗೆ ಯೋಜನೆಯನ್ನು ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆಯಾಗಿ ಅಂತಿಮ ನಿರ್ಧಾರ ಆಗಬೇಕಿದೆ. ಈ ವೇಳೆ ಗೌತಮ್ ಅದಾನಿ ಅವರು ಸಿಎಂ ಅವರನ್ನು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.
ದಕ್ಷಿಣ ಭಾರತದ ರಾಜ್ಯಗಳಲ್ಲೂ ಅದಾನಿ ಸಮೂಹದ ಬೇಕಾದಷ್ಟು ಉದ್ದಿಮೆ, ವ್ಯವಹಾರಗಳಿವೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಭೇಟಿ ನೀಡಿದ್ದ ಅವರು, ನಾನು ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ನನ್ನನ್ನು ಭೇಟಿ ಮಾಡಿದ್ದಾರೆ. ಇದೊಂದು ಸೌಜನ್ಯದ ಭೇಟಿ ಆಗಿತ್ತು.
-ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ