ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಗಣತಿದಾರರಿಗೆ ಸಿಎಂ ಮಾಹಿತಿ

Published : Oct 17, 2025, 11:43 AM IST
Siddaramaiah Koppal

ಸಾರಾಂಶ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಗಳ ಕಾಲ ಸಮಾಧಾನದಿಂದ ಉತ್ತರಿಸಿದ್ದಾರೆ.

 ಬೆಂಗಳೂರು :  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಗಳ ಕಾಲ ಸಮಾಧಾನದಿಂದ ಉತ್ತರಿಸಿದ್ದಾರೆ.

ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರು ಗಣತಿದಾರರಿಗೆ ಮಾಹಿತಿ ನೀಡಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು.

ಎಲ್ಲರೂ ಭಾಗವಹಿಸಿ ಮಾಹಿತಿ ನೀಡಿ:

ಸಿಎಂ ಮನೆ ಸಮೀಕ್ಷೆ ಬಳಿಕ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು, ‘ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿನೀಡಿದ ಸಿಬ್ಬಂದಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯ ಯಶಸ್ವಿಯಾಗಿ ಪೂರೈಸಿದ್ದೇನೆ. ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರ ಈ ಸಮೀಕ್ಷೆಯನ್ನು ಕೈಗೊಂಡಿದೆ’ ಎಂದು ಹೇಳಿದ್ದಾರೆ.

ಇನ್ನು ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ:

ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ, ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ಒಂದು ವೈಜ್ಞಾನಿಕ ಪ್ರಯತ್ನ. ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಖಂಡಿತಾ ಆಗದು. ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿಗಳ ಜೊತೆ ಮಾಹಿತಿ ಹಂಚಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ತಿಮ್ಮಾಪುರ ರಾಜೀನಾಮೆಗೆ ವಿಪಕ್ಷ ಪಟ್ಟು, ಕಲಾಪ ಬಲಿ!
ಸದನದಲ್ಲಿ ಗವರ್ನರ್‌ ಗದ್ದಲ