ಇಂದು ಸಿಎಂ ರಾಜೀನಾಮೆ - ಇಂದೇ ಸುದ್ದಿಗೋಷ್ಠಿಯಲ್ಲಿ ವಿದಾಯ ಭಾಷಣ ಸಾಧ್ಯತೆ?

Published : May 28, 2026, 09:06 AM IST
Siddaramaiah

ಸಾರಾಂಶ

ನಿರ್ಗಮಿಸುವ ಸಾಧ್ಯತೆ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಳಗ್ಗೆ 9ಕ್ಕೆ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಉಪಾಹಾರ ಕೂಟ ಹಮ್ಮಿಕೊಂಡಿದ್ದಾರೆ.ಮಧ್ಯಾಹ್ನದ ನಂತರ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆಣತಿಯಂತೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಲಿದ್ದಾರೆ.

  ಬೆಂಗಳೂರು :  ನಿರ್ಗಮಿಸುವ ಸಾಧ್ಯತೆ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಳಗ್ಗೆ 9ಕ್ಕೆ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಉಪಾಹಾರ ಕೂಟ ಹಮ್ಮಿಕೊಂಡಿದ್ದಾರೆ. ಬಳಿಕ ಮಧ್ಯಾಹ್ನದ ನಂತರ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆಣತಿಯಂತೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಲಿದ್ದಾರೆ. ನಂತರ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಆಪ್ತ ಮೂಲಗಳು ಹೇಳಿವೆ.

ಮಧ್ಯಾಹ್ನದ ನಂತರ ರಾಜ್ಯಪಾಲರ ಭೇಟಿ

ಗುರುವಾರ ಮಧ್ಯಾಹ್ನದ ನಂತರ ರಾಜ್ಯಪಾಲರ ಭೇಟಿಗೆ ಈಗಾಗಲೇ ಸಮಾಯಾವಕಾಶ ಕೋರಿದ್ದಾರೆ. ಅಲ್ಲದೆ, ರಾಜೀನಾಮೆ ಪತ್ರವನ್ನೂ ಸಿದ್ಧಪಡಿಸಿಕೊಳ್ಳಲಾಗಿದೆ. ಹೀಗಾಗಿ ಅವರ ರಾಜೀನಾಮೆ ಬಹುತೇಕ ಖಚಿತ ಎನ್ನಲಾಗುತ್ತಿದೆ.ಇದಕ್ಕೂ ಮುನ್ನ ಅವರು ತಮ್ಮ ಸಚಿವ ಸಂಪುಟದ ಸದಸ್ಯರೊಂದಿಗೆ ಉಪಹಾರ ಕೂಟ ನಡೆಸಲಿದ್ದಾರೆ. ಈ ಬಗ್ಗೆ ಎಲ್ಲ ಸಚಿವರಿಗೂ ಸಂದೇಶ ನೀಡಲಾಗಿದ್ದು, ಗುರುವಾರ ಬೆಳಗ್ಗೆ 9ಕ್ಕೆ ಮನೆಗೆ ಬರಲು ಆಹ್ವಾನಿಸಿದ್ದಾರೆ. ಈ ಕೂಟದಲ್ಲಿ ಭಾಗಿ ಆಗಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಡ ಬುಧವಾರ ತಡರಾತ್ರಿ ನಗರಕ್ಕೆ ಆಗಮಿಸಿದ್ದಾರೆ.

ದೆಹಲಿ ಬೆಳವಣಿಗೆಗಳ ಬಗ್ಗೆ ಸಿದ್ದರಾಮಯ್ಯ ಮೌನ

ದೆಹಲಿ ಸರಣಿ ಸಭೆ ಹಾಗೂ ರಾಹುಲ್ ಗಾಂಧಿ ಅವರ ಆಣತಿ ಪಡೆದು ನಗರಕ್ಕೆ ಆಗಮಿಸಿದ ನಂತರ ದೆಹಲಿ ಬೆಳವಣಿಗೆಗಳ ಬಗ್ಗೆ ಸಿದ್ದರಾಮಯ್ಯ ಮೌನವಾಗಿದ್ದಾರೆ. ಸಭೆಯಲ್ಲಿ ವರಿಷ್ಠರ ಜತೆ ಏನು ಚರ್ಚೆ ನಡೆಯಿತು ಎಂದುಸಂಪುಟದ ಸದಸ್ಯರಿಗೆ ಸ್ಪಷ್ಟವಾಗಿ ವಿವರಿಸುವ ಸಾಧ್ಯತೆಯಿದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಇದೀಗ ಮೌನಕ್ಕೆ ಶರಣಾದ ಸಿಎಂ! ಸಿದ್ದು ರಹಸ್ಯ ನಡೆ ಅರಿಯದಾದ ಕಾಂಗ್ರೆಸ್‌ ಹೈಕಮಾಂಡ್‌
ಡಿಕೆಶಿ ಸಂಯಮದ ನಡೆ! - ಈಗಿನ ವಿದ್ಯಮಾನ ಡಿಸಿಎಂಗೆ ಪೂರಕ