;Resize=(412,232))
ಬೆಂಗಳೂರು : ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ(ಎಸ್‌ಐಆರ್) ವೇಳೆ ನಮೂನೆ 6, 6ಎ, 7 ಮತ್ತು 8 ಸಲ್ಲಿಸುವಾಗ ಉದ್ದೇಶಪೂರ್ವಕ ಲಿಖಿತ ಸುಳ್ಳು ಹೇಳಿಕೆ ಅಥವಾ ಘೋಷಣೆ ನೀಡಿದ ಅರ್ಜಿದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲ ಮತದಾರರ ನೋಂದಣಾಧಿಕಾರಿಗಳಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಗುರುವಾರ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಫಾರ್ಮ್ 7 ದುರ್ಬಳಕೆ ಮಾಡಿದವರ ವಿರುದ್ಧ ಕ್ರಮಕ್ಕೆ ಪಟ್ಟುಹಿಡಿದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸಚಿವ ಸಂಪುಟದೊಂದಿಗೆ ಸತತ ಐದು ತಾಸು ಕಾಲ ಧರಣಿ ಮಾಡಿದ ಬೆನ್ನಲ್ಲೇ ಈ ನಿರ್ದೇಶನ ನೀಡಿದ್ದಾರೆ.
ಮತದಾರರ ನೋಂದಣಾಧಿಕಾರಿಗಳ (ಇಆರ್‌ಒ) ಮುಂದೆ ನಮೂನೆ 7 ರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸುತ್ತಿರುವ ಪ್ರಕರಣಗಳು ಕಚೇರಿ ಗಮನಕ್ಕೆ ಬಂದಿವೆ. ಅಂತಹ ನಮೂನೆಗಳು ನೈಜವಾಗಿಲ್ಲ ಎಂಬ ಆರೋಪವೂ ಇದೆ. ಹೀಗಾಗಿ ಜನತಾ ಪ್ರಾತಿನಿಧ್ಯ ಕಾಯ್ದೆ 1950ರ ಸೆಕ್ಷನ್ 31ರ ನಿಬಂಧನೆಗಳ ಅನ್ವಯ, ಅರ್ಜಿ/ನಮೂನೆಗಳಲ್ಲಿ ಉದ್ದೇಶಪೂರ್ವಕ ಸುಳ್ಳು ಹೇಳಿಕೆ ಅಥವಾ ಘೋಷಣೆಯನ್ನು ನೀಡಿದ ಅರ್ಜಿದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕಾನೂನು ಕ್ರಮ ಕೈಗೊಳ್ಳುವ ಮುನ್ನ ಮತದಾರರ ನೋಂದಣಿ ನಿಯಮಗಳು 1960ರ ನಿಯಮ 20ರ ಅಡಿಯಲ್ಲಿ ವಿಚಾರಣೆ ನಡೆಸಬೇಕು ಎಂದು ರಾಜ್ಯ ಮುಖ್ಯ ಚುನಾವಾಧಿಕಾರಿ ವಿ.ಅನ್ಬುಕುಮಾರ್ ಸೂಚಿಸಿದ್ದಾರೆ.
ಮತದಾರರ ನೋಂದಣಾಧಿಕಾರಿಗಳ (ಇಆರ್‌ಒ) ಮುಂದೆ ನಮೂನೆ 7 ರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸುತ್ತಿರುವ ಪ್ರಕರಣಗಳು ಕಚೇರಿ ಗಮನಕ್ಕೆ ಬಂದಿವೆ. ಅಂತಹ ನಮೂನೆಗಳು ನೈಜವಾಗಿಲ್ಲ ಎಂಬ ಆರೋಪವೂ ಇದೆ. ಹೀಗಾಗಿ ಉದ್ದೇಶಪೂರ್ವಕ ಸುಳ್ಳು ಹೇಳಿಕೆ ಅಥವಾ ಘೋಷಣೆಯನ್ನು ನೀಡಿದ ಅರ್ಜಿದಾರರ ವಿರುದ್ಧ ವಿಚಾರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು.