ಸುರೇಶ್‌ ಕುಮಾರ್‌ ವಿವಾದಾತ್ಮಕ ಹೇಳಿಕೆ : ಮಹಿಳೆಯರಿಗೆ ಅವಮಾನ ಆರೋಪ- ದೂರು

Published : Jan 26, 2026, 11:09 AM IST
S Suresh Kumar

ಸಾರಾಂಶ

ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ವಿರುದ್ಧ ಶಾಸಕ ಎಸ್.ಸುರೇಶ್ ಕುಮಾರ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಪ್ರಕರಣದ ಸಂಬಂಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಮುಖ್ಯಸ್ಥರಾದ ಜಿ.ಪ್ರಕಾಶ್‌ ಮತ್ತು ಮನೋಹರ್‌ ನೇತೃತ್ವದ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದೆ.

  ಬೆಂಗಳೂರು :  ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್ ವಿರುದ್ಧ ಶಾಸಕ ಎಸ್.ಸುರೇಶ್ ಕುಮಾರ್ ನೀಡಿದ್ದ ವಿವಾದಾತ್ಮಕ ಹೇಳಿಕೆ ಪ್ರಕರಣದ ಸಂಬಂಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಮುಖ್ಯಸ್ಥರಾದ ಜಿ.ಪ್ರಕಾಶ್‌ ಮತ್ತು ಮನೋಹರ್‌ ನೇತೃತ್ವದ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದೆ.

ಶಾಸಕರು ಕ್ಷಮೆಯಾಚಿಸಲಿ ಎಂಬ ಘೋಷಣೆ

ಮಹಿಳೆಯರಿಗೆ ಅವಮಾನ ಮಾಡಿದ ಶಾಸಕರು ಕ್ಷಮೆಯಾಚಿಸಲಿ ಎಂಬ ಘೋಷಣೆಗಳುಳ್ಳ ಪೋಸ್ಟರ್‌ಗಳನ್ನು ಅಂಟಿಸುವ ಕಾಂಗ್ರೆಸ್‌ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದ್ದರು. ಬಳಿಕ ಈ ಸಂಬಂಧ ದೂರು ಕೊಡಲು ಬಸವೇಶ್ವರ ನಗರ ಠಾಣೆಗೆ ದೂರು ಕೊಡಲು ಹೋಗಿದ್ದರು. ಆದರೆ ಈ ಘಟನೆ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹಾಗಾಗಿ ಅಲ್ಲಿಗೆ ತೆರಳಿ ದೂರು ನೀಡಲು ಅಧಿಕಾರಿಗಳು ಸೂಚನೆ ನೀಡಿದ್ದರು.

ಕಾಂಗ್ರೆಸ್‌ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು

ಈ ಹಿನ್ನೆಲೆಯಲ್ಲಿ ಭಾನುವಾರ ಕಾಂಗ್ರೆಸ್‌ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ನಿಂದನೆ ಹೇಳಿಕೆ ನೀಡಿರುವ ಶಾಸಕ ಸುರೇಶ್‌ ಕುಮಾರ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ದೂರು ಸ್ವೀಕರಿಸಿ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

2028ಕ್ಕೂ ಬಿಜೆಪಿ, ದಳ ಅಧಿಕಾರಕ್ಕೇರಲ್ಲ : ಸಿದ್ದರಾಮಯ್ಯ
2018ರಲ್ಲಿ ಸಿದ್ದು ಹೇಳಿದ್ದ ಭವಿಷ್ಯ ಏನಾಯ್ತು : ಹೊಸ ಭವಿಷ್ಯದ ನುಡಿದ ಎಚ್‌ಡಿಕೆ