ಕನ್ನಡಪ್ರಭ ವಾರ್ತೆ ಮಂಡ್ಯ
ಶುಕ್ರವಾರ ನಗರದ ಅಂಬೇಡ್ಕರ್ ಭವನದಲ್ಲಿ ಜಾತ್ಯತೀತ ಜನತಾದಳದ ವತಿಯಿಂದ ಆಯೋಜಿಸಿದ್ದ ಮಂಡ್ಯ ಲೋಕಸಭೆ ಚುನಾವಣೆಯ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿ, ಡಾ.ಮಂಜುನಾಥ್ ಅವರನ್ನು ಸ್ಪರ್ಧೆ ಮಾಡುವಂತೆ ನಾನು ಹೇಳಿಲ್ಲ. ಅವರೂ ಸಹ ಬಯಸಿರಲಿಲ್ಲ. ಜನರ ಒತ್ತಾಯದ ಮೇರೆಗೆ ಅವರು ರಾಜಕೀಯಕ್ಕೆ ಬಂದಿದ್ದಾರೆ. ಈಗ ಕಾಂಗ್ರೆಸ್‌ನವರು ದೇವೇಗೌಡರ ಕುಟುಂಬದ ಗುಲಾಮರಾಗೋದು ಬೇಡ ಎಂದು ಹೇಳುತ್ತಿದ್ದಾರೆ. ನಾವು ರಾಮನಗರ ಜನರನ್ನು ಗುಲಾಮರನ್ನಾಗಿ ಮಾಡಿಕೊಂಡಿಲ್ಲ. ನಾವು ಅವರ ಸೇವಕರಾಗಿದ್ದೇವೆ. ರಾಮನಗರ ಜನರನ್ನು ಗುಲಾಮರನ್ನಾಗಿ ಕಾಣೋದು ಕಾಂಗ್ರೆಸ್‌ನವರು ಎಂದು ಹರಿಹಾಯ್ದರು.
ದೇವೇಗೌಡರಿಗೆ ರಾಜಕೀಯವಾಗಿ ಹಾಸನಕ್ಕಿಂತ ಹೆಚ್ಚು ಶಕ್ತಿ ನೀಡಿದ್ದು ಮಂಡ್ಯ ಜಿಲ್ಲೆ. ನನ್ನ ಮಾತುಗಳು ನಾಟಕೀಯ ಮಾತಲ್ಲ. ನಾನು, ನನ್ನ ಕುಟುಂಬದ ಯಾರೂ ಯಾರಿಗೂ ದ್ರೋಹ ಮಾಡಿದವರಲ್ಲ. ಬೆಳೆಯುವವರ ಹಿಂದೆ ನಿಂತು ಶಕ್ತಿ ತುಂಬಿದ್ದೇವೆ ಎಂದು ಸಚಿವ ಚಲುವರಾಯಸ್ವಾಮಿ ಗುರಿಯಾಗಿಸಿಕೊಂಡು ಹೇಳಿದರು.ನಾವು ಮಹಾರಾಜರ ವಂಶಸ್ಥರಲ್ಲ:
೨೦೦೪ರಲ್ಲಿ ಬಹುಮತದೊಂದಿಗೆ ಯಾವ ಪಕ್ಷವೂ ಅಧಿಕಾರಕ್ಕೆ ಬರಲಿಲ್ಲ. ಆಗ ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚನೆ ಮಾಡಿದೆವು. ನಮ್ಮೊಂದಿಗೆ ೫೮ ಜನ ಶಾಸಕರಿದ್ದರು. ಅದರಲ್ಲಿ ಆರು ಮಂದಿ ಮಂತ್ರಿಯಾಗಿದ್ದರು. ಸಂಪುಟಕ್ಕೆ ಮಂಡ್ಯದಿಂದ ಹೆಸರನ್ನು ತೆಗೆದುಕೊಳ್ಳುವಾಗ ಶ್ರೀರಂಗಪಟ್ಟಣದ ವಿಜಯಲಕ್ಷ್ಮೀ ಬಂಡಿಸಿದ್ದೇಗೌಡರ ಹೆಸರನ್ನು ತೆಗೆದುಕೊಂಡಿದ್ದೆವು. ಆದರೆ, ೫೦ ಶಾಸಕರ ಮನವೊಲಿಸಿ ವಿಜಯಲಕ್ಷ್ಮೀ ಅವರ ಹೆಸರನ್ನು ತೆಗೆದು ಚಲುವರಾಯಸ್ವಾಮಿ ಹೆಸರನ್ನು ಸೇರಿಸಿಕೊಂಡೆವು. ಇಂತಹವರು ನಮ್ಮ ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದರು.
ದೇವೇಗೌಡರು ರಾಜಕಾರಣಕ್ಕೆ ಬಂದು ಜನರ ಪ್ರೀತಿ-ವಿಶ್ವಾಸವನ್ನು ಗಳಿಸಿದರೇ ವಿನಃ ಹಣ ಮಾಡಲಿಲ್ಲ. ನಾವು ಸಾಲ ಮಾಡಿ ಪಕ್ಷ ಕಟ್ಟಿದ್ದೇವೆ. ಬಡ್ಡಿ ಹಣ ಕಟ್ಟಿ ಪಕ್ಷವನ್ನು ಬೆಳೆಸಿದ್ದೇವೆ. ಬೇರೆಯವರು ಕೊಟ್ಟ ಹಣವನ್ನು ಸ್ವಂತಕ್ಕೆ ನಾವೆಂದೂ ಬಳಸಿಕೊಂಡಿಲ್ಲ. ಪಕ್ಷ ಸಂಘಟನೆ, ರಾಜಕಾರಣಕ್ಕಾಗಿ ಬಳಸಿದ್ದೇವೆ. ಪ್ರಾಮಾಣಿಕವಾಗಿ, ಜನರ ಅಭಿಮಾನ, ಬೆಂಬಲದಿಂದ ಕಟ್ಟಿ ಬೆಳೆಸಿದ ಪಕ್ಷದಿಂದ ಬೆಳೆದುಹೋದ ಸಿದ್ದರಾಮಯ್ಯನವರು ಜಾತ್ಯತೀತ ಪದವನ್ನು ತೆಗೆಯುವಂತೆ ಹೇಳುತ್ತಾರೆ. ನಾವು ರಾಜಕೀಯದಲ್ಲಿ ಹಲವರನ್ನು ಬೆಳೆಸಿದ್ದೇವೆಯೇ ವಿನಃ ಹಾಳುಮಾಡಿಲ್ಲ ಎಂದು ಟೀಕಾಕಾರರಿಗೆ ತಿರುಗೇಟು ನೀಡಿದರು.
ಜಿಲ್ಲೆಯ ಜನರು ಅನ್ಯಾಯ ಮಾಡಿಲ್ಲ:
ಶಾಸಕರಾದ ಜಿ.ಟಿ.ದೇವೇಗೌಡ, ಎಚ್.ಟಿ.ಮಂಜು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕರಾದ ಸಿ.ಎಸ್.ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ಡಿ.ಸಿ.ತಮ್ಮಣ್ಣ, ಕೆ.ಸುರೇಶ್‌ಗೌಡ, ಡಾ.ಕೆ.ಅನ್ನದಾನಿ, ಜಿ.ಬಿ.ಶಿವಕುಮಾರ್, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ನಗರಸಭೆ ಮಾಜಿ ಅಧ್ಯಕ್ಷರಾದ ಎಚ್.ಎಸ್.ಮಂಜು, ಅಂಬುಜಮ್ಮ ಸೇರಿದಂತೆ ಇತರರಿದ್ದರು.