ಮೋದಿ ಸಿಲುಕಿಸುವ ಕಾಂಗ್ರೆಸ್‌ನ ಮುಖವಾಡ ಕಳಚಿದೆ: ಬಿಜೆಪಿ ಕಿಡಿ

Published : Nov 20, 2026, 06:51 AM IST
BJP

ಸಾರಾಂಶ

ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ‘ಮೋದಿಯವರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಕಾಂಗ್ರೆಸ್ ಪ್ರಯತ್ನಿಸಿತ್ತು ಎಂಬುದು ಈ ಹೇಳಿಕೆಯಿಂದ ಸ್ಪಷ್ಟವಾಗಿದೆ’ ಎಂದಿದೆ.

ನವದೆಹಲಿ : ‘ಪ್ರಕರಣವೊಂದರಲ್ಲಿ ನರೇಂದ್ರ ಮೋದಿ ವಿರುದ್ಧದ ತನಿಖೆಯನ್ನು ಕಾಂಗ್ರೆಸ್‌ನ ಕೆಲ ನಾಯಕರೇ ನಿಲ್ಲಿಸಿದ್ದರು ಹಾಗೂ ಯುಪಿಎ ಅವಧಿಯಲ್ಲಿ ಅವರು ಜೈಲು ಸೇರುವುದನ್ನು ತಪ್ಪಿಸಿದ್ದರು’ ಎಂಬ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ‘ಮೋದಿಯವರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಕಾಂಗ್ರೆಸ್ ಪ್ರಯತ್ನಿಸಿತ್ತು ಎಂಬುದು ಈ ಹೇಳಿಕೆಯಿಂದ ಸ್ಪಷ್ಟವಾಗಿದೆ’ ಎಂದಿದೆ.

ವೀರಪ್ಪ ಮೊಯ್ಲಿ ನೀಡಿದ್ದ ಹೇಳಿಕೆ

ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್‌ ನಾಯಕ ವೀರಪ್ಪ ಮೊಯ್ಲಿ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ, ‘ಗುಜರಾತ್ ಸರ್ಕಾರದಲ್ಲಿ ಮೋದಿ ಮತ್ತು ಅಮಿತ್ ಶಾ ಅಧಿಕಾರದಲ್ಲಿದ್ದಾಗ ಅವರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಕಾಂಗ್ರೆಸ್ ಪ್ರಯತ್ನಿಸಿತ್ತು ಹಾಗೂ ಆಗ ಅವರ ವಿರುದ್ಧ ಮಾಡಲಾದ ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದವು ಎಂಬುದನ್ನು ಮೊಯ್ಲಿ ಅವರ ಹೇಳಿಕೆಗಳೇ ಸ್ಪಷ್ಟಪಡಿಸಿವೆ. ಕಾಂಗ್ರೆಸ್‌ನ ಮುಖವಾಡ ಕಳಚಿದೆ’ ಎಂದು ವಾಗ್ದಾಳಿ ನಡೆಸಿದರು.

ತನಿಖಾ ಸಂಸ್ಥೆಗಳು ಮತ್ತು ನ್ಯಾಯಾಂಗ ಪ್ರಕ್ರಿಯೆಗಳನ್ನು ಕಡೆಗಣಿಸಲಾಗಿತ್ತು

ಜತೆಗೆ, ‘ಯುಪಿಎ ಅವಧಿಯಲ್ಲಿ ತನಿಖಾ ಸಂಸ್ಥೆಗಳು ಮತ್ತು ನ್ಯಾಯಾಂಗ ಪ್ರಕ್ರಿಯೆಗಳನ್ನು ಕಡೆಗಣಿಸಲಾಗಿತ್ತು ಎಂಬುದೂ ಸ್ಪಷ್ಟವಾಗಿದೆ. ಜತೆಗೆ, ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ ಅವರು ಸರ್ಕಾರದ ಮುಖ್ಯಸ್ಥರಾಗಿರಲಿಲ್ಲ ಎಂಬುದೂ ಇದರಿಂದ ತಿಳಿಯುತ್ತದೆ’ ಎಂದು ವ್ಯಂಗ್ಯವಾಡಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

SIRನಿಂದ ಬಿಟ್ಟೋದ ಮತ ಸೇರ್ಪಡೆಗೆ ಅಧಿಕಾರಿ
ಬಸವಣ್ಣ ಬಗ್ಗೆ ವಿವಾದಿತ ಪುಸ್ತಕ ಬರೆದ ಲೇಖಕನ ವಿರುದ್ಧ ಕೇಸ್‌-ಪುಸ್ತಕ ಮುಟ್ಟುಗೋಲು