ಕಾಂಗ್ರೆಸ್‌ ಶಾಸಕರು, ಸಂಸದರಿಂದ ಇಂದು ದೆಹಲಿಯಲ್ಲಿ ದಂಗಲ್‌

Published : Oct 12, 2026, 05:22 AM IST
Congress

ಸಾರಾಂಶ

ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಕ್ರೋಚ್‌ ಜನತಾ ಪಕ್ಷ (ಸಿಜೆಪಿ) ದೇಶವ್ಯಾಪಿ ಬೃಹತ್ ಪ್ರತಿಭಟನೆ ಆರಂಭಿಸಿರುವ ಬೆನ್ನಲ್ಲೇ, ಇದೀಗ ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಕೂಡ ದೆಹಲಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ‘

ನವದೆಹಲಿ: ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಕ್ರೋಚ್‌ ಜನತಾ ಪಕ್ಷ (ಸಿಜೆಪಿ) ದೇಶವ್ಯಾಪಿ ಬೃಹತ್ ಪ್ರತಿಭಟನೆ ಆರಂಭಿಸಿರುವ ಬೆನ್ನಲ್ಲೇ, ಇದೀಗ ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಕೂಡ ದೆಹಲಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ‘ಇಂಡಿಯಾ’ ಮೈತ್ರಿಕೂಟದ ನಾಯಕರು ಸೋಮವಾರ ಸಂಜೆ 4 ಗಂಟೆ ವೇಳೆಗೆ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರನ್ನು ಭೇಟಿ ಮಾಡಿ ಚುನಾವಣಾ ಆಯೋಗ, ಸಿಇಸಿ ಜ್ಞಾನೇಶ್‌ ಕುಮಾರ್‌ ಮತ್ತು ಎಸ್‌ಐಆರ್‌ ಬಗ್ಗೆ ದೂರು ನೀಡಲು ನಿರ್ಧರಿಸಿದ್ದಾರೆ.

ದೆಹಲಿಯ ಇಂಡಿಯಾ ಗೇಟ್‌ನಿಂದ ಸುಪ್ರೀಂಕೋರ್ಟ್‌ವರೆಗೆ ಬೃಹತ್‌ ಪಾದಯಾತ್ರೆ

ದೆಹಲಿಯ ಇಂಡಿಯಾ ಗೇಟ್‌ನಿಂದ ಸುಪ್ರೀಂಕೋರ್ಟ್‌ವರೆಗೆ ಬೃಹತ್‌ ಪಾದಯಾತ್ರೆ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಈ ಹೋರಾಟದ ವೇಳೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವ ಸಂಪುಟ ಸದಸ್ಯರು, ಎಲ್ಲಾ ಕಾಂಗ್ರೆಸ್‌ ಶಾಸಕರು, ಸಂಸದರು ಸೇರಿ ಪಕ್ಷದ ನಾಯಕರು ಭಾಗಿಯಾಗಲಿದ್ದಾರೆ. ಅದೇ ರೀತಿ ಕಾಂಗ್ರೆಸ್ ಆಡಳಿತದ ರಾಜ್ಯಗಳ ಶಾಸಕರು, ಸಚಿವರು, ಇತರೆ ರಾಜ್ಯಗಳ ಕಾಂಗ್ರೆಸ್‌ ನಾಯಕರು ಕೂಡಾ ಭಾಗಿಯಾಗುವ ನಿರೀಕ್ಷೆ ಇದೆ.

ಈ ಪ್ರತಿಭಟನೆಯನ್ನು ಪ್ರಜಾಪ್ರಭುತ್ವದ ರಕ್ಷಣೆಗಾಗಿ ನಡೆಯುತ್ತಿರುವ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ಕರೆದಿರುವ ಕಾಂಗ್ರೆಸ್‌ ಪಕ್ಷ, ‘ಇಂಡಿಯಾ ಒಕ್ಕೂಟ ಹಾಗೂ ದೇಶದ ಯುವಕರು ದೆಹಲಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಬೀದಿಗಿಳಿದು ತಮ್ಮ ವಿರೋಧ ದಾಖಲಿಸಲಿದ್ದಾರೆ. ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಲಿದ್ದಾರೆ’ ಎಂದು ಹೇಳಿಕೊಂಡಿದೆ.

ಇದೇ ವೇಳೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ನೇತೃತ್ವದ ನಿಯೋಗವೊಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರನ್ನು ಭೇಟಿಯಾಗಿ ಮತಗಳವು ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಆಗ್ರಹಿಸಲಿದೆ ಎಂದು ಕಾಂಗ್ರೆಸ್‌ ತಿಳಿಸಿದೆ.

ದೇಶಾದ್ಯಂತ ಗಟ್ಟಿ ಧ್ವನಿ:

ಮತಗಳವು ವಿರೋಧಿಸಿ ಇಂಡಿಯಾ ಒಕ್ಕೂಟ, ದೇಶದ ಯುವಕರು ಮತ್ತೊಮ್ಮೆ ಬೀದಿಗಿಳಿಯಲಿದ್ದು, ಈ ಬಾರಿ ಮತಗಳವು ವಿರುದ್ಧದ ನಮ್ಮ ದನಿ ದೇಶಾದ್ಯಂತ ಹೆಚ್ಚು ಗಟ್ಟಿಯಾಗಿ ಮತ್ತು ಹೆಚ್ಚು ಸ್ಪಷ್ಟವಾಗಿ ಮೊಳಗಲಿದೆ ಎಂದು ರಾಹುಲ್‌ ಗಾಂಧಿ ಹೇಳಿಕೊಂಡಿದ್ದಾರೆ.

ಪ್ರತಿಭಟನೆ ವೇಳೆ ನಾವು ಸಿಜೆಐ ಅವರನ್ನೂ ಭೇಟಿಯಾಗಲಿದ್ದು, ಸಂವಿಧಾನವನ್ನು ದಿಲ್ಲಿಯ ಬೀದಿಯಲ್ಲಿ ಚೂರು ಚೂರು ಮಾಡುತ್ತಿರುವಾಗ, ಪ್ರಜಾಪ್ರಭುತ್ವದ ಧಮನಕ್ಕೆ ಯತ್ನಿಸುತ್ತಿರುವಾಗ ಕಾನೂನಿನ ರಕ್ಷಕರು ಕಣ್ಣಿಗೆ ಬಟ್ಟೆಕಟ್ಟಿ ಕೂರಬಾರದು ಎಂದು ಅವರಲ್ಲಿ ಆಗ್ರಹಿಸುವುದಾಗಿ ತಿಳಿಸಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಜಿರಳೆ ಹೋರಾಟ ವೇಳೆ ಗುಣಗಾನ - ಜೆನ್‌ಝೀಗಳೇ ದೊಡ್ಡ ಕನಸು ಕಾಣಿ: ಮೋದಿ
ಸಿಎಂ ವಿಜಯ್‌-ರಾಗಾ ಭೇಟಿ : 1 ತಾಸು ಚರ್ಚೆ, ಕಾಫಿ ಟೈಂ